Train Derail Update: ಓಡಿಶಾ ರೈಲು ದುರಂತ, 50 ಯಾತ್ರಿಗಳ ದುರ್ಮರಣ

Train Derail Update: ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಸಂಜೆ ದೊಡ್ಡ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಲವಾರು ಬೋಗಿಗಳು ಹಳಿತಪ್ಪಿವೆ. ಅಪಘಾತದಲ್ಲಿ 50 ಮಂದಿ ಸಾವನ್ನಪ್ಪಿದ್ದು, 200ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.  

Written by - Nitin Tabib | Last Updated : Jun 2, 2023, 10:53 PM IST
  • ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳು ಹಳಿತಪ್ಪಿವೆ,
  • ಹಳಿತಪ್ಪಿದ ರೈಲು ಮತ್ತೊಂದು ಮಾರ್ಗದಲ್ಲಿ ಎದುರಿನಿಂದ ಬರುತ್ತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.
  • ಈ ಅವಘಡದಲ್ಲಿ 50 ಪ್ರಯಾಣಿಕರು ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
  • ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Train Derail Update: ಓಡಿಶಾ ರೈಲು ದುರಂತ, 50 ಯಾತ್ರಿಗಳ ದುರ್ಮರಣ title=

Train Derail Latest Update: ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳು ಹಳಿತಪ್ಪಿವೆ, ಹಳಿತಪ್ಪಿದ ರೈಲು ಮತ್ತೊಂದು ಮಾರ್ಗದಲ್ಲಿ ಎದುರಿನಿಂದ ಬರುತ್ತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ 50 ಪ್ರಯಾಣಿಕರು ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಎನ್‌ಡಿಆರ್‌ಎಫ್ ತಂಡಗಳೂ ಸ್ಥಳಕ್ಕೆ ಆಗಮಿಸಿವೆ. ಕೋರಮಂಡಲ್ ಎಕ್ಸ್‌ಪ್ರೆಸ್ ಕೋಲ್ಕತ್ತಾ ಬಳಿಯ ಶಾಲಿಮಾರ್ ನಿಲ್ದಾಣದಿಂದ ಚೆನ್ನೈ ಸೆಂಟ್ರಲ್‌ಗೆ ಹೋಗುತ್ತಿದ್ದಾಗ ರಾತ್ರಿ 7.20 ರ ಸುಮಾರಿಗೆ ಬಹಂಗಾ ಬಜಾರ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ಈ ಘಟನೆ ಕುರಿತು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಮಾತನಾಡಿ, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಬಾಲಸೋರ್ ಬಳಿ ಸಂಜೆ 7 ಗಂಟೆ ಸುಮಾರಿಗೆ ಹಳಿತಪ್ಪಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಇದರಿಂದ ರೈಲಿನ ಬೋಗಿಗಳು ಸಮಾನಾಂತರ ಹಳಿ ಮೇಲೆ ಬಿದ್ದಿವೆ. ಸ್ವಲ್ಪ ಸಮಯದ ನಂತರ, ಯಶವಂತಪುರದಿಂದ ಹೌರಾಕ್ಕೆ ಹೋಗುತ್ತಿದ್ದ ಮತ್ತೊಂದು ರೈಲು ಆ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ, ಇದರಿಂದಾಗಿ ಆ ರೈಲಿನ 3-4 ಬೋಗಿಗಳು ಸಹ ಹಳಿತಪ್ಪಿವೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅಪಘಾತದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ರೈಲ್ವೆ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೂಡ ನಿಯಂತ್ರಣ ಕೊಠಡಿಗೆ ಆಗಮಿಸಿದ್ದಾರೆ.

ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಬಾಲಾಸೋರ್‌ನ ಕಲೆಕ್ಟರ್‌ಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮತ್ತು ರಾಜ್ಯ ಮಟ್ಟದಿಂದ ಯಾವುದೇ ಹೆಚ್ಚುವರಿ ಸಹಾಯವನ್ನು ಒದಗಿಸಲು ಸ್ಥಳಕ್ಕೆ ತಲುಪುವಂತೆ ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದಲ್ಲಿ SRC ಗೆ ಸೂಚನೆ ನೀಡಲಾಗುವುದು ಎನ್ನಲಾಗಿದೆ. ರೈಲು ಪ್ರಯಾಣಿಕರಿಂದ ತುಂಬಿತ್ತು ಎಂದು ಹೇಳಲಾಗುತ್ತಿದೆ. ರೈಲು ಅಪಘಾತದ ಕುರಿತು ರೈಲ್ವೆ ತುರ್ತು ಸಂಖ್ಯೆ 6782262286 ಅನ್ನು ಜಾರಿಗೊಳಿಸಿದೆ.

ಇದನ್ನೂ ಓದಿ-ಓಡಿಷಾದ ಬಾಲಾಸೋರ್ ಬಳಿ ಹಳಿತಪ್ಪಿದ ಕೋರಮಂಡಲ ಎಕ್ಪ್ರೆಸ್ ರೈಲು, ಹಲವು ಯಾತ್ರಿಗಳಿಗೆ ಗಾಯ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಾಹಿತಿ ಪ್ರಕಾರ, ಈ ಘಟನೆಯಲ್ಲಿ ಕತ್ತಲೆಯಿಂದಾಗಿ, ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯು ತುಂಬಾ ಸವಾಲಿನಿಂದ ಕೂಡಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ-New Parliament: ನೂತನ ಸಂಸತ್ ಭವನದಲ್ಲಿ ಅಖಂಡ ಭಾರತದ ನಕ್ಷೆ ಕಂಡು ಬೆಚ್ಚಿ ಬಿದ್ದ ಪಾಕಿಸ್ತಾನ, ಹೇಳಿದ್ದೇನು ಗೊತ್ತಾ?

ಪ್ರಸ್ತುತ ಅಪಘಾತ ಪರಿಹಾರ ರೈಲನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಆಗ್ನೇಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಯ (ODRAF) ನಾಲ್ಕು ಕಾಲಂಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ಮೂರು ಕಾಲಂಗಳು ಮತ್ತು 60 ಆಂಬ್ಯುಲೆನ್ಸ್‌ಗಳು ಗಾಯಾಳುಗಳನ್ನು ರಕ್ಷಿಸುವಲ್ಲಿ ನಿರತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಮತ್ತು ರೈಲ್ವೇ ಸಹಾಯವಾಣಿಯನ್ನು ಆರಂಭಿಸಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News