Balasore Train Mishap: ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಏಳು ರೈಲ್ವೆ ನೌಕರರನ್ನು ಅಮಾನತುಗೊಳಿಸಲಾಗಿದೆ. ಇವರಲ್ಲಿ ಸಿಬಿಐ ಬಂಧಿಸಿರುವ ಮೂವರು ಉದ್ಯೋಗಿಗಳೂ ಸೇರಿದ್ದಾರೆ. ಇವರೆಲ್ಲ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಉನ್ನತ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಈ ಮಾಹಿತಿ ನೀಡಿದೆ. ಜೂನ್ 2 ರಂದು ಒಡಿಶಾದ ಬಾಲಸೋರ್ ಜಿಲ್ಲೆಯ ಬಹಂಗಾ ಬಜಾರ್ ರೈಲು ನಿಲ್ದಾಣದ ಬಳಿ ಮೂರು ರೈಲುಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ 293 ಜನರು ಮೃತಪಟ್ಟಿದ್ದರು ಮತ್ತು 1,200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ. ಆಗ್ನೇಯ ರೈಲ್ವೆ ಜನರಲ್ ಮ್ಯಾನೇಜರ್ ಅನಿಲ್ ಕುಮಾರ್ ಮಿಶ್ರಾ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ ಅಪಘಾತ ತಪ್ಪಿಸಬಹುದಿತ್ತು ಎಂದಿದ್ದಾರೆ.

COMMERCIAL BREAK
SCROLL TO CONTINUE READING

ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಿಶ್ರಾ, ''ಸಿಬಿಐ ಬಂಧಿಸಿರುವ ಮೂವರು ನೌಕರರು ಸೇರಿದಂತೆ ಏಳು ಮಂದಿ ನೌಕರರನ್ನು ರೈಲ್ವೇ ಅಮಾನತುಗೊಳಿಸಿದೆ. ನಿಯಮಗಳ ಪ್ರಕಾರ, ಬಂಧಿತ ನೌಕರನನ್ನು 24 ಗಂಟೆಯೊಳಗೆ ಅಮಾನತುಗೊಳಿಸಲಾಗಿದೆ. ಸಿಬಿಐ ಹಿರಿಯ ಸೆಕ್ಷನ್ ಇಂಜಿನಿಯರ್ (ಸಿಗ್ನಲ್) ಅರುಣ್ ಕುಮಾರ್ ಮಹಂತ್, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ತಂತ್ರಜ್ಞ ಪಪ್ಪು ಕುಮಾರ್ ಅವರನ್ನು ಸಿಬಿಐ ಬಂಧಿಸಿತ್ತು. ಬುಧವಾರದಿಂದ ಮತ್ತೆ ನಾಲ್ಕು ದಿನಗಳ ಕಾಲ ಅವರನ್ನು ಸಿಬಿಐ ಕಸ್ಟಡಿಗೆ ತೆಗೆದುಕೊಂಡಿದೆ. ಐದು ದಿನಗಳ ಕಸ್ಟಡಿ ಮುಗಿದ ನಂತರ ಮೂವರು ಉದ್ಯೋಗಿಗಳನ್ನು ಮಂಗಳವಾರ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.


ಇದನ್ನೂ ಓದಿ-Supreme Court ಗೆ ಇಬ್ಬರು ನೂತನ ನ್ಯಾಯಾಧೀಶರ ನೇಮಕ


ಇದಕ್ಕೂ ಮುನ್ನ ಆಗ್ನೇಯ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತ (ಸಿಆರ್‌ಎಸ್) ನಡೆಸಿದ ವಿಚಾರಣೆಯಲ್ಲಿ, ನಿಲ್ದಾಣದ ಉತ್ತರ ಸಿಗ್ನಲ್ ಟವರ್‌ನಲ್ಲಿ ಸಿಗ್ನಲಿಂಗ್ ಸರ್ಕ್ಯೂಟ್ ಅನ್ನು ಟ್ಯಾಂಪರಿಂಗ್ ಮಾಡಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಜೂನ್ 2 ರಂದು ಹೌರಾಕ್ಕೆ ಹೋಗುವ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತೊಂದು ಮಾರ್ಗದಲ್ಲಿ ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದು ಅದರ ಹೆಚ್ಚಿನ ಕೋಚ್‌ಗಳು ಹಳಿತಪ್ಪಿದವು. ಏತನ್ಮಧ್ಯೆ, ಅದೇ ಸಮಯದಲ್ಲಿ ಹಾದು ಹೋಗುತ್ತಿದ್ದ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಕೊನೆಯ ಕೆಲವು ಬೋಗಿಗಳ ಮೇಲೆ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಕೆಲವು ಬೋಗಿಗಳು ಪಲ್ಟಿಯಾಗಿ ಈ ಭೀಕರ ಅಪಘಾತ ಸಂಭವಿಸಿದೆ.


ಇದನ್ನೂ ಓದಿ-ಶ್ರೀಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ! ಮತ್ತೆ ಹೆಚ್ಚಾಯ್ತು ಚಿಲ್ಲರೆ ಹಣದುಬ್ಬರ


52 ಮೃತ ದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ
ಬಾಲಸೋರ್ ರೈಲು ಅಪಘಾತದಲ್ಲಿ ಸಾವನ್ನಪ್ಪಿದ ಸುಮಾರು 50 ಜನರ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರ ದೇಹಗಳನ್ನು ಈಗಲೂ ಭುವನೇಶ್ವರದಲ್ಲಿರುವ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಲ್ಲಿ ಇರಿಸಲಾಗಿದೆ. ಏತನ್ಮಧ್ಯೆ, ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಇಬ್ಬರು ಸಂತ್ರಸ್ತರ ಶವಗಳನ್ನು ಇಲ್ಲಿನ ಸತ್ಯನಗರ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಿದೆ. ಅಪಘಾತದಲ್ಲಿ ಮೃತಪಟ್ಟ 81 ಮಂದಿಯ ಶವಗಳನ್ನು ಭುವನೇಶ್ವರದ ಏಮ್ಸ್‌ನಲ್ಲಿ ಇರಿಸಲಾಗಿದ್ದು, ಈ ಪೈಕಿ 29 ಮೃತದೇಹಗಳನ್ನು ಡಿಎನ್‌ಎ ಪರೀಕ್ಷೆ ಮೂಲಕ ಗುರುತಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುರುತಿಸಲಾದ 29 ಶವಗಳ ಪೈಕಿ 22 ಶವಗಳನ್ನು ಭಾನುವಾರ ಅಂತ್ಯಸಂಸ್ಕಾರ ಮಾಡಲಾಯಿತು. ಪ್ರಸ್ತುತ, ರೈಲು ಅಪಘಾತದಲ್ಲಿ ಬಲಿಯಾದ 52 ಮಂದಿಯ ಶವಗಳನ್ನು ಭುವನೇಶ್ವರದ ಏಮ್ಸ್‌ನಲ್ಲಿ ಇರಿಸಲಾಗಿದೆ' ಎಂದು ಅವರು ಹೇಳಿದ್ದಾರೆ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.