Old Pension Scheme: ಹಳೆಯ ಪಿಂಚಣಿ ಯೋಜನೆ ಮತ್ತೆ ಜಾರಿ: ಇನ್ಮುಂದೆ ಮಹಿಳೆಯರಿಗೆ ಸಿಗಲಿದೆ ರೂ.1500

Old Pension Scheme:  ಹಿಮಾಚಲ ಪ್ರದೇಶದ ಸುಖು ಸರ್ಕಾರವು ನೌಕರರಿಗೆ ನೀಡಿದ ಭರವಸೆಯನ್ನು ಈಡೇರಿಸಿದೆ. ಸರ್ಕಾರದ ಮೊದಲ ಸಚಿವ ಸಂಪುಟದಲ್ಲಿ ಹಳೆ ಪಿಂಚಣಿ ಯೋಜನೆ ಮರುಸ್ಥಾಪಿಸಬೇಕು ಎಂದು ತೀರ್ಮಾನಿಸಲಾಗಿತ್ತು. ಹಳೆಯ ಪಿಂಚಣಿ ಯೋಜನೆ ಪುನಶ್ಚೇತನಕ್ಕೆ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಇದೇ ವೇಳೆ ಹಿಮಾಚಲ ಪ್ರದೇಶದ ಮಹಿಳೆಯರಿಗೆ ಮಾಸಿಕ 1500 ರೂಪಾಯಿ ಪಿಂಚಣಿ ನೀಡುವುದಾಗಿ ಸಂಪುಟ ಸಭೆಯಲ್ಲಿ ಮತ್ತೊಂದು ನಿರ್ಧಾರ ಕೈಗೊಳ್ಳಲಾಗಿದೆ.

Written by - Bhavishya Shetty | Last Updated : Jan 14, 2023, 07:43 AM IST
    • ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪನೆ
    • ಮಹಿಳೆಯರಿಗೆ ಪ್ರತಿ ತಿಂಗಳು 1500 ರೂಪಾಯಿ ಪಿಂಚಣಿ ನೀಡಲು ತೀರ್ಮಾನ
    • ಸುಖ್ವಿಂದರ್ ಸಿಂಗ್ ಸುಖು ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ
Old Pension Scheme: ಹಳೆಯ ಪಿಂಚಣಿ ಯೋಜನೆ ಮತ್ತೆ ಜಾರಿ: ಇನ್ಮುಂದೆ ಮಹಿಳೆಯರಿಗೆ ಸಿಗಲಿದೆ ರೂ.1500 title=
Pension Scheme

Old Pension Scheme:  ಹಿಮಾಚಲ ಪ್ರದೇಶದ ಸುಖವಿಂದರ್ ಸಿಂಗ್ ಸುಖು ಸರ್ಕಾರವು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಿದೆ. ಸುಖ್ವಿಂದರ್ ಸಿಂಗ್ ಸುಖು ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ, ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರುಸ್ಥಾಪಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸುಖು ಸಚಿವ ಸಂಪುಟದ ಈ ನಿರ್ಧಾರದ ಪ್ರಯೋಜನವನ್ನು ಒಂದು ಲಕ್ಷ 36 ಸಾವಿರ ನೌಕರರು ಪಡೆಯಲಿದ್ದಾರೆ. ಇದಲ್ಲದೇ ಮಹಿಳೆಯರಿಗೆ ಪ್ರತಿ ತಿಂಗಳು 1500 ರೂಪಾಯಿ ಪಿಂಚಣಿ ನೀಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಅಗ್ನಿ ವೀರ ಯೋಜನೆ ಬಗ್ಗೆ ತಿಳಿದುಕೊಳ್ಳಲು ಇಲ್ಲಿದೆ ಸುವರ್ಣಾವಕಾಶ..!

ಹಿಮಾಚಲ ಪ್ರದೇಶದ ಸುಖು ಸರ್ಕಾರವು ನೌಕರರಿಗೆ ನೀಡಿದ ಭರವಸೆಯನ್ನು ಈಡೇರಿಸಿದೆ. ಸರ್ಕಾರದ ಮೊದಲ ಸಚಿವ ಸಂಪುಟದಲ್ಲಿ ಹಳೆ ಪಿಂಚಣಿ ಯೋಜನೆ ಮರುಸ್ಥಾಪಿಸಬೇಕು ಎಂದು ತೀರ್ಮಾನಿಸಲಾಗಿತ್ತು. ಹಳೆಯ ಪಿಂಚಣಿ ಯೋಜನೆ ಪುನಶ್ಚೇತನಕ್ಕೆ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಇದೇ ವೇಳೆ ಹಿಮಾಚಲ ಪ್ರದೇಶದ ಮಹಿಳೆಯರಿಗೆ ಮಾಸಿಕ 1500 ರೂಪಾಯಿ ಪಿಂಚಣಿ ನೀಡುವುದಾಗಿ ಸಂಪುಟ ಸಭೆಯಲ್ಲಿ ಮತ್ತೊಂದು ನಿರ್ಧಾರ ಕೈಗೊಳ್ಳಲಾಗಿದೆ.

ಮೊದಲ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ:

ವಿಶೇಷವೆಂದರೆ, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮೊದಲ ಸಂಪುಟ ಸಭೆಯಲ್ಲಿ ಹಳೆಯ ಪಿಂಚಣಿ ಯೋಜನೆ ಮರುಸ್ಥಾಪಿಸುವುದಾಗಿ ಭರವಸೆ ನೀಡಿದ್ದು, ಅದನ್ನು ಈಡೇರಿಸಿದೆ. ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆಯನ್ನು ಸರ್ಕಾರದ ನೀತಿ ದಾಖಲೆಯನ್ನಾಗಿ ಅಳವಡಿಸಿಕೊಳ್ಳಲು ಸಂಪುಟ ಸಭೆ ನಿರ್ಧರಿಸಿದೆ.

ಮಹಿಳೆಯರಿಗೆ ಪ್ರತಿ ತಿಂಗಳು 1500 ರೂ:

ಜನವರಿ 13 ರಿಂದ ಹಳೆಯ ಪಿಂಚಣಿ ಯೋಜನೆಯ ಲಾಭ ಪ್ರಾರಂಭವಾಗಲಿದೆ ಎಂದು ಹಿಮಾಚಲ ಪ್ರದೇಶ ಸಿಎಂ ಸುಖವಿಂದ್ ಸಿಂಗ್ ಸುಖು ಹೇಳಿದ್ದಾರೆ. ಈ ಕುರಿತು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು. 18 ರಿಂದ 60 ವರ್ಷ ವಯೋಮಾನದ ಮಹಿಳೆಯರಿಗೆ ತಿಂಗಳಿಗೆ 1,500 ರೂ.ಗಳನ್ನು ನೀಡುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ.

ಇದನ್ನೂ ಓದಿ: Makar Sankranti 2023: ಈ ನಗರಗಳಲ್ಲಿ ಚೀನೀ ಮಾಂಜಾ ನಿಷೇಧ

ಕೃಷಿ ಸಚಿವ ಚಂದ್ರಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ ಎಂದು ಸಿಎಂ ಸುಖು ತಿಳಿಸಿದ್ದಾರೆ. ಇದರಲ್ಲಿ ಧನಿ ರಾಮ್ ಶಾಂಡಿಲ್, ಜಗತ್ ನೇಗಿ ಮತ್ತು ಅನಿರುದ್ಧ್ ಸಿಂಗ್ ಅವರನ್ನು ಸದಸ್ಯರನ್ನಾಗಿ ಸೇರಿಸಲಾಗಿದೆ. ಈ ಉಪಸಮಿತಿಯು ಮಹಿಳೆಯರಿಗೆ ಮಾಸಿಕ 1500 ರೂ.ಗಳನ್ನು ನೀಡಲು ಮುಂದಿನ 30 ದಿನಗಳಲ್ಲಿ ಚೌಕಟ್ಟು ಸಿದ್ಧಪಡಿಸಲಿದೆ ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News