ಮುಂಬೈ: ನೂಡಲ್ಸ್​ ಪಾಕೆಟ್​​ಗಳಲ್ಲಿ 6 ಕೋಟಿಗೂ ಅಧಿಕ ಮೌಲ್ಯದ ಚಿನ್ನ, ವಜ್ರಗಳು ಪತ್ತೆಯಾಗಿವೆ. ವಾಣಿಜ್ಯ ನಗರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಮಂಗಳವಾರ (ಏಪ್ರಿಲ್​ 23) ಈ ಘಟನೆ ನಡೆದಿದೆ. 


COMMERCIAL BREAK
SCROLL TO CONTINUE READING

ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕರೊಬ್ಬರ ಬ್ಯಾಗ್ ಪರಿಶೀಲಿಸಿದ್ದಾರೆ. ಅದರಲ್ಲಿ ನೂಡಲ್ಸ್ ಪ್ಯಾಕೆಟ್​ಗಳು ಪತ್ತೆಯಾಗಿವೆ. ನೂಡಲ್ಸ್​ ಪಾಕೆಟ್‌ಗಳನ್ನು ತೆರೆದು ನೋಡಿದ ಅಧಿಕಾರಿಗಳಿಗೆ ಶಾಕ್‌ ಆಗಿದೆ.  ಯಾಕೆಂದರೆ ನೂಡಲ್ಸ್​ ಪಾಕೆಟ್​ನಲ್ಲಿ ಕೋಟಿಗಟ್ಟಲೇ ಮೌಲ್ಯದ ಚಿನ್ನ, ವಜ್ರಗಳು ಪತ್ತೆಯಾಗಿದೆ. 


ಇದನ್ನೂ ಓದಿ: ಜಾಗತಿಕ ತಾಪಮಾನ ಏರಿಕೆಯಿಂದಾಗಿ ಈ ಹಿಮನದಿ ಸರೋವರಗಳು ಅಪಾಯದಲ್ಲಿದೆ : ಇಸ್ರೋ


4.44 ಕೋಟಿ ಮೌಲ್ಯದ 6.8 ಕೆಜಿ ಚಿನ್ನ ಮತ್ತು 2.02 ಕೋಟಿ ರೂ. ಮೌಲ್ಯದ ವಜ್ರಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮುಂಬೈನಿಂದ ಬ್ಯಾಂಕಾಕ್‌ಗೆ ತೆರಳುತ್ತಿದ್ದ ಭಾರತೀಯ ಪ್ರಯಾಣಿಕನ ಟ್ರಾಲಿ ಬ್ಯಾಗ್‌ನಲ್ಲಿ ನೂಡಲ್ಸ್ ಪಾಕೆಟ್‌ಗಳಲ್ಲಿ ಈ ಬೆಲೆಬಾಳುವ ವಸ್ತುಗಳು ಪತ್ತೆಯಾಗಿದೆ. 


ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಯಾಣಿಕನನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಅದೇ ರೀತಿ ಶ್ರೀಲಂಕಾದ ಕೊಲಂಬೊದಿಂದ ಮುಂಬೈಗೆ ಬಂದಿದ್ದ ಮಹಿಳೆಯೊಬ್ಬರು ಚಿನ್ನವನ್ನು ತುಂಡು ಮಾಡಿ ಬಟ್ಟೆಯಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದದ್ದು ಪತ್ತೆಯಾಗಿದೆ. ಆಕೆಯನ್ನೂ ಸಹ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ.  


ಇದನ್ನೂ ಓದಿ: Lok Sabha Election 2024: "ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ ಎನ್ನುವುದು ಸಾಬೀತಾಗಿದೆ"


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.