ಮುಂಬೈ: 'ಬುಲ್ಲಿ ಬಾಯಿ' ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ, ಉತ್ತರಾಖಂಡದ ಯುವತಿ ಮತ್ತು ಆಕೆಯ ಸ್ನೇಹಿತನೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

'ಬುಲ್ಲಿ ಬಾಯಿ' ಆ್ಯಪ್ ಪ್ರಕರಣದಲ್ಲಿ ವಿಶಾಲ್ ಕುಮಾರ್ ಝಾ ಮತ್ತು ಶ್ವೇತಾ ಸಿಂಗ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮೂರನೇ ಆರೋಪಿ ಶ್ವೇತಾ ಅವರ ಸ್ನೇಹಿತ ಎಂದು ಮುಂಬೈ ಪೊಲೀಸ್ ಕಮಿಷನರ್ ಹೇಮಂತ್ ನಗ್ರಾಳೆ ಹೇಳಿದ್ದಾರೆ.


ಈ ಪ್ರಕರಣದಲ್ಲಿ ಇನ್ನಷ್ಟು ಜನರು ಭಾಗಿಯಾಗಿರಬಹುದು ಎಂದು ಮುಂಬೈ ಪೊಲೀಸ್ ಆಯುಕ್ತರು ಹೇಳಿದ್ದಾರೆ. ಆದ್ದರಿಂದ ಪ್ರಕರಣದ ಬಗ್ಗೆ ಮಾಹಿತಿ ಇರುವವರು ಮುಂದೆ ಬಂದು ವಿವರಗಳನ್ನು ಪೊಲೀಸರೊಂದಿಗೆ ಹಂಚಿಕೊಳ್ಳುವಂತೆ ಅವರು ವಿನಂತಿಸಿದ್ದಾರೆ.


ಇದಕ್ಕೂ ಮುನ್ನ ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್, ಆ್ಯಪ್‌ನ ಮಾಸ್ಟರ್ ಮೈಂಡ್ ಎನ್ನಲಾದ ಶ್ವೇತಾ ಸಿಂಗ್ ಅವರು ಅತ್ಯಂತ ಬಡ ಕುಟುಂಬದಿಂದ ಬಂದವರು. ಅವಳ ತಂದೆ ತಿರಿಕೊಂಡಿದ್ದಾರೆ. ಅವಳು ಹಣಕ್ಕಾಗಿ ಇದನ್ನು ಮಾಡಿದ್ದಾಳೆಂದು ತೋರುತ್ತದೆ ಎಂದು ಹೇಳಿದ್ದಾರೆ.


ಬಾಂದ್ರಾ ನ್ಯಾಯಾಲಯವು ವಿಶಾಲ್ ಕುಮಾರ್ ಅವರನ್ನು ಜನವರಿ 10 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಶ್ವೇತಾ ಸಿಂಗ್ ಟ್ರಾನ್ಸಿಟ್ ರಿಮಾಂಡ್‌ನಲ್ಲಿದ್ದಾರೆ.


ಗಿಟ್‌ಹಬ್ ಪ್ಲಾಟ್‌ಫಾರ್ಮ್‌ನಲ್ಲಿ ಹೋಸ್ಟ್ ಮಾಡಲಾದ 'ಬುಲ್ಲಿ ಬಾಯಿ' ಅಪ್ಲಿಕೇಶನ್‌ನಲ್ಲಿ ಮಹಿಳೆಯರ, ವೈದ್ಯರ ಫೋಟೋಗಳನ್ನು ಹರಾಜಿಗೆ ಅಪ್‌ಲೋಡ್ ಮಾಡಲಾಗಿದೆ ಎಂಬ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಸೋಮವಾರ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.


ಭಾನುವಾರ, ಪಶ್ಚಿಮ ಮುಂಬೈ ಸೈಬರ್ ಪೊಲೀಸ್ ಠಾಣೆಯು 'ಬುಲ್ಲಿ ಬಾಯಿ' ಅಪ್ಲಿಕೇಶನ್ ಡೆವಲಪರ್‌ಗಳು ಮತ್ತು ಅಪ್ಲಿಕೇಶನ್ ಅನ್ನು ಪ್ರಚಾರ ಮಾಡಿದ ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಪ್ರಕರಣ ದಾಖಲಿಸಿದೆ. 


ಇದನ್ನೂ ಓದಿ: PAN card:ಪ್ಯಾನ್ ಕಾರ್ಡ್ ಬಳಕೆದಾರರಿಗೆ ಪ್ರಮುಖ ಮಾಹಿತಿ! ಈ ತಪ್ಪಿಗೆ ಬೀಳುತ್ತೆ 10 ಸಾವಿರ ರೂ ದಂಡ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.