ಶಾಸಕ ಮುನಿರತ್ನ ಮನೆ ಬಳಿ ಸ್ಫೋಟ, ಓರ್ವ ವ್ಯಕ್ತಿ ಸಾವು

ಬೆಂಗಳೂರಿನ ರಾಜರಾಜೇಶ್ವರಿ ನಗರದ 11ನೇ ಬಿ ಕ್ರಾಸ್ ವೈಯಾಲಿಕಾವಲ್ ಬಳಿ ಇರುವ ಮುನಿರತ್ನ ಮನೆ ಬಳಿ ಈ ಘಟನೆ ನಡೆದಿದೆ.

Updated: May 19, 2019 , 11:26 AM IST
ಶಾಸಕ ಮುನಿರತ್ನ ಮನೆ ಬಳಿ ಸ್ಫೋಟ, ಓರ್ವ ವ್ಯಕ್ತಿ ಸಾವು
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿರುವ ಕಾಂಗ್ರೆಸ್ ಶಾಸಕ ಮುನಿರತ್ನ ಅವರ ಮನೆ ಬಳಿ ಸ್ಫೋಟ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. 

ಬೆಂಗಳೂರಿನ ರಾಜರಾಜೇಶ್ವರಿ ನಗರದ 11ನೇ ಬಿ ಕ್ರಾಸ್ ವೈಯಾಲಿಕಾವಲ್ ಬಳಿ ಇರುವ ಮುನಿರತ್ನ ಮನೆ ಬಳಿ ಈ ಘಟನೆ ನಡೆದಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಸಿಲಿಂಡರ್ ಸ್ಫೋಟದಿಂದ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. 

ಘಟನೆಯಲ್ಲಿ ಅವರ ಮನೆ ಕೆಲಸ ಮಾಡುತ್ತಿದ್ದ ವೆಂಕಟೇಶ್ ಎಂಬಾತ ಸಾವನ್ನಪ್ಪಿದ್ದು, ದೇಹ ಸಂಪೂರ್ಣ ಛಿದ್ರಗೊಂಡಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.