ನವದೆಹಲಿ: ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಾಗಿ ಜನವರಿಯಲ್ಲಿ ಟ್ರಸ್ಟ್ ರಚಿಸಬಹುದು ಎಂದು ಹೇಳಲಾಗುತ್ತಿದ್ದು, ಇದಕ್ಕಾಗಿ ಸರ್ಕಾರ ಸಿದ್ಧತೆಗಳನ್ನು ಅಂತಿಮಗೊಳಿಸಲು ಪ್ರಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಸಾಧು-ಸಂತರೊಂದಿಗೆ ಸಭೆ: 
ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ರಾಮನ ದೇವಾಲಯ ನಿರ್ಮಾಣ ಟ್ರಸ್ಟ್ ರಚನೆಗೆ ಸಂಬಂಧಿಸಿದಂತೆ ಈಗಾಗಲೇ ದೆಹಲಿಯಲ್ಲಿ ಒಂದು ಸುತ್ತಿನ ಮಾತುಕತೆ ನಡೆದಿದೆ. ರಾಮನ ದೇವಾಲಯ ನಿರ್ಮಾಣಕ್ಕಾಗಿ ಟ್ರಸ್ಟ್ ಸ್ಥಾಪಿಸಲು ಫೆಬ್ರವರಿ 9 ಕೊನೆಯ ದಿನಾಂಕ ಆಗಿದೆ.  


ಇದು ಸುಪ್ರೀಂ ಕೋರ್ಟ್‌ನ ಆದೇಶ:
ನವೆಂಬರ್ 9 ರಂದು ಬಹುಕಾಲದ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ನೀಡಿದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ 2.77 ಎಕರೆ ಭೂಮಿಯನ್ನು ರಾಮಮಂದಿರ ದೇವಾಲಯ ನಿರ್ಮಾಣಕ್ಕೆ ನೀಡಿದೆ. ಇದರೊಂದಿಗೆ, ಮತ್ತೊಂದು ಸ್ಥಳದಲ್ಲಿ ಮುಸ್ಲಿಮರಿಗೆ ಮಸೀದಿ ನಿರ್ಮಿಸಲು  ಐದು ಎಕರೆ ಭೂಮಿಯನ್ನು ನೀಡುವಂತೆಯೂ ನ್ಯಾಯಾಲಯ ಆದೇಶಿಸಿತು.


ಭಗವಾನ್ ರಾಮ ಅದೇ ಸ್ಥಳದಲ್ಲಿ ಜನಿಸಿದನೆಂದು ಹಿಂದೂಗಳು ನಂಬುತ್ತಾರೆ, ಈ ನಂಬಿಕೆಯನ್ನು ಪ್ರಶ್ನಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ದೇವಾಲಯ ನಿರ್ಮಾಣಕ್ಕಾಗಿ ಮೂರು ತಿಂಗಳಲ್ಲಿ ಟ್ರಸ್ಟ್ ರಚಿಸುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಆದೇಶಿಸಿತ್ತು. ದೇವಾಲಯ ನಿರ್ಮಾಣಕ್ಕಾಗಿ ಟ್ರಸ್ಟ್ ರಚಿಸಲು ಫೆಬ್ರವರಿ 9 ರ ಗಡುವು ನೀಡಲಾಗಿದೆ.


ಭವ್ಯ ದೇವಾಲಯ ನಿರ್ಮಿಸುವುದಾಗಿ ಬಿಜೆಪಿ ಭರವಸೆ:
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರು ಮತ್ತು ಕೇಂದ್ರ ಮಂತ್ರಿಗಳು ಅಯೋಧ್ಯೆಯಲ್ಲಿ ಭವ್ಯವಾದ ರಾಮ ದೇವಾಲಯ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದರು. ಜಾರ್ಖಂಡ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ನಡೆದ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಲ್ಕು ತಿಂಗಳಲ್ಲಿ ಆಕಾಶವನ್ನು ಮುಟ್ಟುತ್ತಿರುವ ಭವ್ಯ ರಾಮನ ದೇವಾಲಯವನ್ನು ನಿರ್ಮಿಸುವುದಾಗಿ ಘೋಷಿಸಿದರು. ಜಾರ್ಖಂಡ್‌ನ ಪಕೂರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಅಮಿತ್ ಶಾ, "ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಈಗ ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ಭಗವಾನ್ ರಾಮನ ಆಕಾಶವನ್ನು ಮುಟ್ಟುವ ಭವ್ಯ ದೇವಾಲಯವನ್ನು ನಿರ್ಮಿಸಲಾಗುವುದು" ಎಂದು ಹೇಳಿದರು.