ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ವೆರಿನಾಗ್ ಎಂಬಲ್ಲಿ ಶನಿವಾರ ನಸುಕಿನ ಜಾವ ಭದ್ರತಾ ಪಡೆಗಳು ಮತ್ತುಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಭದ್ರತಾ ಪಡೆಯು ಆತನ ಮೃತ ದೇಹವನ್ನು ವಶಪಡಿಸಿಕೊಂಡಿದೆ.



COMMERCIAL BREAK
SCROLL TO CONTINUE READING

"ಭದ್ರತಾ ಪಡೆ ಯೋಧರು ಶೋಧ ಕಾರ್ಯ ಆರಂಭಿಸಿದಾಗ ಅಡಗಿ ಕುಳಿತಿದ್ದ ಉಗ್ರರು ಇದ್ದಕ್ಕಿದ್ದಂತೆ ಯೋಧರತ್ತ ಗುಂಡು ಹಾರಿಸಲು ಆರಂಭಿಸಿದರು. ಈ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ. ಮತ್ತಷ್ಟು ಉಗ್ರರು ಅಡಗಿರುವ ಸಾಧ್ಯತೆಯಿದ್ದು, ಶೋಧ ಕಾರ್ಯ ಮುಂದುವರೆದಿದೆ" ಎಂದು ಹಿರಿಯ ಪೋಲಿಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.


ಅರಣ್ಯದಲ್ಲಿ ಅಡಗಿರುವ ಮತ್ತಷ್ಟು ಉಗ್ರರನ್ನು ಸೆದೆಬಡಿಯಲು ಸಾಕಷ್ಟು ಸಮಯ ತೆಗೆದುಕೊಳ್ಳಲಿದೆ. ಮೂಲಗಳ ಪ್ರಕಾರ ಹತ್ಯೆಯಾದ ಉಗ್ರನನ್ನು ಇಕ್ಬಾಲ್ ಅಹ್ಮದ್ ಎಂದು ಗುರುತಿಸಲಾಗಿದ್ದು ದೋರು ಪ್ರದೇಶದ ಪಂಜೋತ್ ನಿವಾಸಿ ಎನ್ನಲಾಗಿದೆ. ಈತ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.