ಈಗ ಕಾಶ್ಮೀರದಲ್ಲಿ ಚುನಾವಣೆ ನಡೆಯಬೇಕೋ ಬೇಡವೋ ಎನ್ನುವುದನ್ನು ಚುನಾವಣಾ ಆಯೋಗ ನಿರ್ಧರಿಸಬೇಕು- ರಾಮ್ ಮಾಧವ್
ಪುಲ್ವಾಮಾ ದಾಳಿಯಲ್ಲಿ 40 ಉಗ್ರರು ಮೃತಪಟ್ಟಿರುವ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾದವ್ ಆತಂಕ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಪುಲ್ವಾಮಾ ದಾಳಿಯಲ್ಲಿ 40 ಉಗ್ರರು ಮೃತಪಟ್ಟಿರುವ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾದವ್ ಆತಂಕ ವ್ಯಕ್ತಪಡಿಸಿದ್ದಾರೆ.
ಉಗ್ರರು ದಾಳಿ ಮಾಡಿದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ರಾಮ್ ಮಾಧವ್ ಪಾಕಿಸ್ತಾನದ ವಿರುದ್ದ ಹಾಗೂ ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ ಅಗತ್ಯ ಎಂದು ಹೇಳಿದ್ದಾರೆ.
ಇಂತಹ ಸಂದರ್ಭದಲ್ಲಿ "ಚುನಾವಣಾ ಆಯೋಗ ಮಾತ್ರ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಯಬೇಕೋ ಬೇಡವೋ ಎನ್ನುವುದರ ಬಗ್ಗೆ ಚಿಂತಿಸಬೇಕು.ಈ ಘಟನೆ ಹಿಂದಿರುವವರು ಪಾಕಿಸ್ತಾನದಲ್ಲಿ ಅಡಗಿದ್ದಾರೆ.ಈಗಾಗಲೇ ಜೈಶ್ ಇ-ಮೊಹಮ್ಮದ್ ಈ ದಾಳಿಯ ಹೊಣೆಯನ್ನು ಹೊತ್ತಿದೆ. ಆದರೆ ಪಾಕಿಸ್ತಾನ ಮಾತ್ರ ಏನು ಮಾಡುತ್ತಿಲ್ಲ.ರಾಜತಾಂತ್ರಿಕ ಸಂಪರ್ಕವನ್ನು ಬಳಸಿಕೊಳ್ಳುವ ಮೂಲಕ ಎಲ್ಲ ದೇಶಗಳನ್ನು ಒಗ್ಗೂಡಿಸಬೇಕಾಗಿದೆ ಎಂದು ಮಾದವ್ ತಿಳಿಸಿದರು.
ಇದೇ ವೇಳೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿರುವ ಬಗ್ಗೆ ರಾಮ್ ಮಾಧವ್ ಶ್ಲಾಘಿಸಿದರು.