ನವದೆಹಲಿ : ಭಾರತೀಯ ವಾಯುಪಡೆಯ ಎಂಐ-17 ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ( Helicopter crash) ಜಿಲ್ಲೆಯ ಕೂನೂರ್ ಪ್ರದೇಶದಲ್ಲಿ ಬುಧವಾರ ಪತನಗೊಂಡಿದೆ. ಈ ಅಪಘಾತದಲ್ಲಿ, ದೇಶ ತನ್ನ ಮೊದಲ ಚಿಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ (Bipin Rawat) ಮತ್ತು ಅವರ ಪತ್ನಿ ಮಧುಲಿಕಾ ರಾವತ್ (Madhulika Rawat) ಮತ್ತು ಇತರ 11 ಸೈನಿಕರನ್ನು ಕಳೆದುಕೊಂಡಿದೆ. ಹೆಲಿಕಾಪ್ಟರ್ ಅಪಘಾತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ (varun Singh) ಮಾತ್ರ ಬದುಕುಳಿದಿದ್ದಾರೆ.


COMMERCIAL BREAK
SCROLL TO CONTINUE READING

ಗ್ರೂಪ್ ಕ್ಯಾಪ್ಟನ್ ವರುಣ್  (varun Singh) ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಭಾರತೀಯ ವಾಯುಪಡೆಯ (IAF) ಅಧಿಕೃತ ಹೇಳಿಕೆಯ ಪ್ರಕಾರ, ಹೆಲಿಕಾಪ್ಟರ್ ಅಪಘಾತದಲ್ಲಿ 14 ಜನರ ಪೈಕಿ ಬದುಳಿದ ಏಕೈಕ ಜೀವ ಎಂದರೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್. ಹೆಲಿಕಾಪ್ಟರ್ ಅಪಘಾತದ (Helicopter crash) ನಂತರ, ತೀವ್ರ ಬೆಂಕಿ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ದೇಹದಲ್ಲಿ ತೀವ್ರ ಸುಟ್ಟ ಗಾಯಗಳಾಗಿವೆ. ಇದೀಗ ಅವರಿಗೆ ವೆಲ್ಲಿಂಗ್ಟನ್‌ನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 


ಇದನ್ನೂ ಓದಿ : PM Awas : ಪಿಎಂ ಆವಾಸ್ ಯೋಜನೆ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಕೇಂದ್ರ ಸರ್ಕಾರ!


ಈ ವರ್ಷ ಶೌರ್ಯ ಚಕ್ರ ನೀಡಿ ಗೌರವ : 
ಈ ಬಾರಿಯ ಸ್ವಾತಂತ್ರ್ಯ ದಿನದಂದು ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ramanath Kovind) ಅವರು ಶೌರ್ಯ ಚಕ್ರವನ್ನು ಪ್ರದಾನ ಮಾಡಿ ಗೌರವಿಸಿದ್ದಾರೆ. ಕಳೆದ ವರ್ಷ ಹಾರಾಟದ ಸಮಯದಲ್ಲಿ, ತೇಜಸ್ ಯುದ್ಧ ವಿಮಾನದಲ್ಲಿ (Tejas fighter jet) ತಾಂತ್ರಿಕ ದೋಷ ಎದುರಾಗಿತ್ತು. ಈ ಸಂದರ್ಭದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ದೋಷದ ಹೊರತಾಗಿಯೂ, ತಮ್ಮ ಯುದ್ಧ ವಿಮಾನವನ್ನು  ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದರು. ಈ ಧೈರ್ಯಶಾಲಿ ಕಾರ್ಯಕ್ಕಾಗಿ, ಅವರಿಗೆ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗಿತ್ತು. 


ವರುಣ್ ಸಿಂಗ್ ಯುಪಿಯ ಡಿಯೋರಿಯಾ ನಿವಾಸಿ:
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ರುದ್ರಪುರ ತಾಲೂಕಿನ ಕನ್ಹೋಲಿ ಗ್ರಾಮದವರು. ಪ್ರಸ್ತುತ ವರುಣ್ ಸಿಂಗ್ ಅವರು, ಭಾರತೀಯ ವಾಯುಪಡೆಯಲ್ಲಿ ಗ್ರೂಪ್ ಕ್ಯಾಪ್ಟನ್ ಆಗಿ ನೇಮಕಗೊಂಡಿದ್ದಾರೆ. ತಮಿಳುನಾಡಿನ ವೆಲ್ಲಿಂಗ್ಟನ್‌ನಲ್ಲಿರುವ ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜ್ (DSSC) ನಿರ್ದೇಶಕರಾಗಿದ್ದಾರೆ. ವರುಣ್ ಸಿಂಗ್ ತಂದೆ ಕರ್ನಲ್ ಕೆಪಿ ಸಿಂಗ್ ಕೂಡ ಸೇನೆಯಿಂದ ನಿವೃತ್ತರಾಗಿದ್ದಾರೆ. ಪ್ರಸ್ತುತ ಅವರ ಕುಟುಂಬವು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ವಾಸಿಸುತ್ತಿದೆ.


ಇದನ್ನೂ ಓದಿ : CDS General Bipin Rawat : CDS ಜನರಲ್ ಬಿಪಿನ್ ರಾವತ್ ಕುಟುಂಬದ ಹಿನ್ನೆಲೆ ಏನು?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.