ನವದೆಹಲಿ : ಕರ್ನಾಟಕದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್  ದ್ವಿಸದಸ್ಯ ಪೀಠ ಗುರುವಾರ ತೀರ್ಪು ನೀಡಿದ್ದು, ಈ ವಿಚಾರದಲ್ಲಿ ಇಬ್ಬರು ನ್ಯಾಯಮೂರ್ತಿಗಳ ಅಭಿಪ್ರಾಯ ಬೇರೆ ಬೇರೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ  ಪೀಠಕ್ಕೆ ವರ್ಗಾಯಿಸಲಾಗಿದೆ. 


COMMERCIAL BREAK
SCROLL TO CONTINUE READING

ಸುಪ್ರೀಂ ಕೋರ್ಟ್‌ನ ಇಬ್ಬರೂ ನ್ಯಾಯಮೂರ್ತಿಗಳ ತೀರ್ಪು : 
ನ್ಯಾಯಾಲಯದಲ್ಲಿ, ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ತಮ್ಮ ತೀರ್ಪನ್ನು ಮೊದಲು ಓದಿದ್ದಾರೆ. ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ವಜಾಗೊಳಿಸುತ್ತಿರುವುದಾಗಿ ಹೇಳಿದ್ದಾರೆ. ಆದರೆ ನ್ಯಾಯಮೂರ್ತಿ ಸುಧಾಂಶು ಧುಲಿಯಾ, ಭಿನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಕರ್ನಾಟಕ ಹೈಕೋರ್ಟ್  ನ  ಆದೇಶವನ್ನು ರದ್ದುಗೊಳಿಸಿದ್ದಾರೆ. ಇದರೊಂದಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಸರ್ಕಾರದ ಆದೇಶವನ್ನೂ ತಿರಸ್ಕರಿಸಿದ್ದಾರೆ.


ಇದನ್ನೂ ಓದಿ : Mallikarjun Kharge : 'ಬಕ್ರೀದ್‌ನಲ್ಲಿ ಬದುಕಿದರೆ ಮೊಹರಂನಲ್ಲಿ ಕುಣಿಯಬಹುದು'


10 ದಿನಗಳ ವಿಚಾರಣೆ ಬಳಿಕ ಪೀಠ ತೀರ್ಪನ್ನು ಕಾಯ್ದಿರಿಸಲಾಗಿತ್ತು : 
ಮಾರ್ಚ್ 24 ರಂದು ಅರ್ಜಿದಾರರು, ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠದಲ್ಲಿ 10 ದಿನಗಳ ಕಾಲ ಹಿಜಾಬ್ ವಿವಾದದ ಬಗ್ಗೆ ಸುದೀರ್ಘ ವಿಚಾರಣೆ ನಡೆದಿತ್ತು. 


ಅರ್ಜಿ ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್ : 
ರಾಜ್ಯದ ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈ ಕೋರ್ಟ್ ವಜಾಗೊಳಿಸಿತ್ತು. ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೈಕೋರ್ಟ್ ಹೇಳಿತ್ತು.


ಇದನ್ನೂ ಓದಿ : ಭ್ರಷ್ಟಾಚಾರದಿಂದಾಗಿ ಮಾನವ ಹಕ್ಕುಗಳು 'ರಾಜಿಯಾಗುತ್ತವೆ'-ಉಪರಾಷ್ಟ್ರಪತಿ


 ಏನಿದು ಪ್ರಕರಣ ? :
ಕರ್ನಾಟಕದಲ್ಲಿ ಹಿಜಾಬ್ ವಿವಾದ ಈ ವರ್ಷದ ಜನವರಿಯಲ್ಲಿ ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಾರಂಭವಾಯಿತು. ನಂತರ ವಿವಾದ ರಾಜ್ಯದ ಇತರ ನಗರಗಳಿಗೂ ಹಬ್ಬಿತ್ತು. ನಂತರ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತು. ಆದರೆ ಕರ್ನಾಟಕ ಹೈಕೋರ್ಟ್ ತರಗತಿಯಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ  ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿತ್ತು. ಮಾರ್ಚ್ 15 ರಂದು ನೀಡಿದ ತೀರ್ಪಿನಲ್ಲಿ, ಹಿಜಾಬ್ ಧರಿಸುವುದು ಇಸ್ಲಾಂನ ಅಗತ್ಯ ಆಚರಣೆಯ ಭಾಗವಲ್ಲ ಎಂದು ಹೈಕೋರ್ಟ್‌ ಹೇಳಿತ್ತು. ಹಾಗಾಗಿ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಪಾಲಿಸುವಂತೆ ರಾಜ್ಯದ ಆದೇಶ ಸರಿಯಾಗಿದೆ ಎಂದು ಹೇಳಿತ್ತು. ಇದಾದ ಬಳಿಕ  ಪ್ರಕರಣ ಸುಪ್ರೀಂ ಕೋರ್ಟ್‌ ತಲುಪಿತ್ತು. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.