close

News WrapGet Handpicked Stories from our editors directly to your mailbox

ಅಭಿವೃದ್ಧಿಗಾಗಿ ಕೆಲಸ ಮಾಡಲು ಮತ್ತೊಂದು ಅವಕಾಶ: ನಿತಿನ್ ಗಡ್ಕರಿ

ಭಾರತ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಲಿದೆ. ಕಾರ್ಮಿಕರು, ರೈತರು ಮತ್ತು ಯುವಜನರ ಪ್ರಗತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನಿತಿನ್ಹೇ ಗಡ್ಕರಿ ಹೇಳಿದ್ದಾರೆ.

PTI | Updated: May 23, 2019 , 06:34 PM IST
ಅಭಿವೃದ್ಧಿಗಾಗಿ ಕೆಲಸ ಮಾಡಲು ಮತ್ತೊಂದು ಅವಕಾಶ: ನಿತಿನ್ ಗಡ್ಕರಿ

ನಾಗ್ಪುರ್: ಲೋಕಸಭೆ ಚುನಾವಣೆ 2019ರಲ್ಲಿ ಬಿಜೆಪಿ ಭಾರೀ ವಿಜಯ ಸಾಧಿಸುವುದರೊಂದಿಗೆ, ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡಲು ಜನರು ಮತ್ತೊಮ್ಮೆ ಅವಕಾಶ ನೀಡಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.

ಸಂಜೆ 4.30 ರವರೆಗೆ ಬಿಜೆಪಿ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 542 ಲೋಕಸಭಾ ಕ್ಷೇತ್ರಗಳಲ್ಲಿ 294 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ನಾಗ್ಪುರ ಬಿಜೆಪಿ ಅಭ್ಯರ್ಥಿ ನಿತಿನ್ ಗಡ್ಕರಿ ಕಳೆದ 5 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಡೆಸಿದ ಅಭಿವೃದ್ಧಿ ಕಾರ್ಯಗಳನ್ನು ಕಳೆದ 50 ವರ್ಷಗಳ ಅಭಿವೃದ್ಧಿ ಕಾರ್ಯಗಳನ್ನೂ ಮೀರಿದ್ದು ಎಂದಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಭಾರತ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಲಿದೆ. ಕಾರ್ಮಿಕರು, ರೈತರು ಮತ್ತು ಯುವಜನರ ಪ್ರಗತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು" ಎಂದು ಹೇಳಿದರು.

ನಾಗ್ಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿತಿನ್ ಗಡ್ಕರಿ ಅವರು, ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ನಾನಾ ಪಟೋಲೆ ವಿರುದ್ಧ 1,01,132 ಮತಗಳ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ.