ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಪ್ರಶ್ನೋತ್ತರ ಅವಧಿ ಆರಂಭಗೊಳ್ಳುತ್ತಿದ್ದಂತೆಯೇ ಪ್ರತಿಪಕ್ಷಗಳು ಹಲವು ವಿಷಯಗಳ ವಿರುದ್ಧ ಘೋಷಣೆ ಕೂಗಿ, ಬಾವಿಗಿಳಿದು ಪ್ರತಿಭಟನೆ ನಡೆಸಿದವು.
ವಿಪಕ್ಷಗಳಾದ ತೆಲುಗು ದೇಶಂ ಮತ್ತು ಸಮಾಜವಾದಿ ಪಕ್ಷದ ಸಂಸದರು ದಲಿತರ ಮೇಲಿನ ದೌರ್ಜನ್ಯ ಮತ್ತು ಸಾಮೂಹಿಕ ಹಲ್ಲೆ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರತಿಭಟನೆ ನಡೆಸಿದರು.
Samajwadi Party and Telugu Desam Party MPs protest in the well of the House in Lok Sabha over different issues (mob lynching cases and demand for special status for Andhra Pradesh) #MonsoonSession
— ANI (@ANI) July 18, 2018
ಈ ಮಧ್ಯೆ ಮಾತನಾಡಿದ ಕಾಂಗ್ರೆಸ್ ಸಂಸದ ಜೋತಿರಾಧಿತ್ಯ ಶಿಂಧ್ಯಾ, "ಎನ್ ಡಿಎ ಸರ್ಕಾರ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದೆ, ಅಲ್ಲದೆ ಈ ಸರ್ಕಾರದ ಅವಧಿಯಲ್ಲಿ ಪ್ರತಿನಿತ್ಯ ಮಹಳೆಯ ಮೇಲೆ ಅತ್ಯಾಚಾರ ನಡೆಯುತ್ತಿದೆ. ಹೀಗಾಗಿ ಕಾಂಗ್ರೆಸ್ ವಿಶ್ವಾಸ ನಿರ್ಣಯ ಮಂಡಿಸಲಿದೆ" ಎಂದರು.
ಅಧಿವೇಶನಕ್ಕೂ ಮುನ್ನ ಮಾದ್ಯಮಗಳೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಂಸತ್ ಮುಂಗಾರು ಅಧಿವೇಶನ ಸುಸೂತ್ರವಾಗಿ ನಡೆಯಲು ಸಹಕರಿಸಬೇಕು ಎಂದು ಎಲ್ಲಾ ಪಕ್ಷಗಳ ನಾಯಕರನ್ನು ಮನವಿ ಮಾಡಿದ್ದಾರೆ. ಸಂಸತ್ತಿನಲ್ಲಿ ಪ್ರಸ್ತಾಪಿಸುವ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಹಾಗಾಗಿ ಎಲ್ಲಾ ಪಕ್ಷಗಳ ಸದಸ್ಯರು ಸಂಸತ್ತಿನ ಅಮೂಲ್ಯವಾದ ಸಮಯವನ್ನು ಪರಸ್ಪರ ಸಹಕಾರದ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಇಂದಿನಿಂದ ಆರಂಭವಾಗಿರುವ ಅಧಿವೇಶನ ಆಗಸ್ಟ್ 10ರವರೆಗೂ ನಡೆಯಲಿದೆ.