ನವದೆಹಲಿ: ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಸೇರಿದಂತೆ ಪ್ರತಿಪಕ್ಷಗಳು ಗುರುವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಧನಕ್ಕೊಳಗಾದ ರಾಜಕೀಯ ನಾಯಕರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದವು.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಕೂಡ ಜಂತರ್ ಮಂತ್ರದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇರಿಕೊಂಡರು. ಐಎನ್‌ಎಕ್ಸ್ ಮೀಡಿಯಾಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿ ಚಿದಂಬರಂ ಅವರನ್ನು ಸಿಬಿಐ ಬುಧವಾರ ರಾತ್ರಿ ಬಂಧಿಸಿದೆ.



ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್, ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ಎಸ್ಪಿ ನಾಯಕ ರಾಮ್‌ಗೋಪಾಲ್ ಯಾದವ್, ಲೋಕ್ ತಾಂತ್ರಿಕ  ಜನತಾದಳದ ಶರದ್ ಯಾದವ್, ಆರ್‌ಜೆಡಿಯ ಮನೋಜ್ ಜಾ ಮತ್ತು ಟಿಎಂಸಿಯ ದಿನೇಶ್ ತ್ರಿವೇದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಜಮ್ಮು ಮತ್ತು ಕಾಶ್ಮೀರದಲ್ಲಿ ಸಹಜ ಸ್ಥಿತಿ ಪುನಃಸ್ಥಾಪನೆ, ಕಣಿವೆಯಲ್ಲಿ ಟೆಲಿಕಾಂ ಸೇವೆಗಳನ್ನು ಪುನರಾರಂಭಿಸಿ ಮತ್ತು ಬಂಧನಕ್ಕೊಳಗಾದ ಎಲ್ಲ ರಾಜಕೀಯ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.



ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೇಂದ್ರ ರದ್ದುಪಡಿಸಿದ ನಂತರ ಬಂಧನಕ್ಕೊಳಗಾದವರಲ್ಲಿ ನಾಯಕರಾದ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ ಕೂಡ ಸೇರಿದ್ದಾರೆ.ಗುರುವಾರ ಬೆಳಿಗ್ಗೆ ಚೆನ್ನೈನಿಂದ ದೆಹಲಿಗೆ ಆಗಮಿಸಿದ ಕಾರ್ತಿ ಚಿದಂಬರಂ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದರು.