ನವದೆಹಲಿ:  ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಎನ್ಕೌಂಟರ್ ಬಗ್ಗೆ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸುಪ್ರೀಂಕೋರ್ಟ್ ಉತ್ತರ ಪ್ರದೇಶದ ಯೋಗಿ ಸರ್ಕಾರವನ್ನು ಕೇಳಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಬಳಿಕ ಸುಪ್ರೀಂಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ನಕಲಿ ಎನ್ಕೌಂಟರ್'ಗೆ ಸಂಬಂಧಿಸಿದಂತೆ 2 ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಮೂರು ವಾರಗಳ ನಂತರ ನಡೆಯಲಿದೆ. ಪಿಐಎಲ್ ನಲ್ಲಿ ರಾಜ್ಯದಲ್ಲಿ ಒಂದು ಸಾವಿರಕ್ಕಿಂತ ಹೆಚ್ಚು ಎನ್ಕೌಂಟರ್ ಆಗಿರುವ ಬಗ್ಗೆ ತನಿಖೆ ನಡೆಸಲು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ. ನಕಲಿ ಎನ್ಕೌಂಟರ್ಗಳನ್ನು ಆಪರೇಷನ್ ಆಲ್ ಔಟ್ ಅಡಿಯಲ್ಲಿ ಕೆಲವು ಸಮಯದವರೆಗೆ ಕಾರ್ಯಗತಗೊಳಿಸಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.



COMMERCIAL BREAK
SCROLL TO CONTINUE READING

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಜಸ್ಟಿಸ್ ಎಂಎಂ ಖಾನ್ವಿಲ್ಕರ್ ಮತ್ತು ಡಿಸಿ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಸಿವಿಲ್ ಲಿಬರ್ಟಿ (PUCL) ನ ಎನ್ಜಿಒ ಪೀಪಲ್ಸ್ ಯೂನಿಯನ್ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಿದೆ.


PUCL ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಸಂಜಯ್ ಪಾರಿಖ್, ಕಳೆದ ಕೆಲವು ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ಸುಮಾರು 500 ಮಂದಿಯನ್ನು ಎನ್ಕೌಂಟರ್ ಮಾಡಲಾಗಿದೆ. ಎನ್ಕೌಂಟರ್ ಸಂದರ್ಭದಲ್ಲಿ 58 ನಾಗರಿಕರು ತಮ್ಮ ಜೀವ ಕಳೆದು ಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.