ನವದೆಹಲಿ: COVID-19 ರ ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಯಾವುದೇ ಸಾವುಗಳು ಸಂಭವಿಸಿಲ್ಲ ಎನ್ನುವ ಕೇಂದ್ರದ ಉತ್ತರದ ಬಗ್ಗೆ ಕಿಡಿ ಕಾರಿರುವ ರಾಹುಲ್ ಗಾಂಧಿ ‘ಸಬ್ ಯಾದ್ ರಖಾ ಜಯೇಗಾ’ (ಎಲ್ಲವನ್ನೂ ನೆನಪಿಸಿಕೊಳ್ಳಲಾಗುವುದು) ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದ ನಂತರ ಪ್ರತಿಪಕ್ಷದಿಂದ ತೀವ್ರ ಟೀಕೆಗೆ ಗುರಿಯಾಗಿದೆ.


ಇದನ್ನೂ ಓದಿ : ಇನ್ನು ಈ ರೀತಿ ಡೇಟಾ ಬ್ಯಾಕ್ ಅಪ್ ಮಾಡಲಿದೆ WhatsApp, ಬಳಕೆದಾರರ ಮೇಲಾಗುವ ಪರಿಣಾಮ ಏನು?


ಕೇಂದ್ರ ಆರೋಗ್ಯ ರಾಜ್ಯ ಸಚಿವ ಭಾರತಿ ಪ್ರವೀಣ್ ಪವಾರ್ ವಿರುದ್ಧ ಎರಡು ದಿನಗಳ ಹಿಂದೆ ರಾಜ್ಯಸಭೆಯಲ್ಲಿ"ಸಾವುಗಳನ್ನು ವರದಿ ಮಾಡಲು ವಿವರವಾದ ಮಾರ್ಗಸೂಚಿಗಳನ್ನು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿದೆ.ಅದರ ಪ್ರಕಾರ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿಯಮಿತವಾಗಿ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪ್ರಕರಣಗಳು ಮತ್ತು ಸಾವುಗಳನ್ನು ವರದಿ ಮಾಡುತ್ತವೆ. ಆದಾಗ್ಯೂ, ಆಮ್ಲಜನಕದ ಕೊರತೆಯಿಂದ ಯಾವುದೇ ಸಾವುಗಳು ನಿರ್ದಿಷ್ಟವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ವರದಿಯಾಗಿಲ್ಲ "ಎಂದು ತಿಳಿಸಿದ್ದರು.


ಇದನ್ನೂ ಓದಿ : Aadhaar-SIM: ಒಂದು ಆಧಾರ್ ಕಾರ್ಡ್‌ನಿಂದ ಎಷ್ಟು ಸಿಮ್‌ಗಳನ್ನು ಖರೀದಿಸಬಹುದು?


YouTube Super Thanks: YouTuberಗಳಿಗಾಗಿ ತೆರೆದುಕೊಂಡ ಆದಾಯದ ಹೊಸ ಮಾರ್ಗ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ


Twitter