)
Pahalgam Attack Latest News In Kannada: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ನಲ್ಲಿ ಕಾರ್ಯಾಚರಣೆ ನಡೆಸಿದ್ದ ಭದ್ರತಾ ಸಿಬ್ಬಂದಿ ಪಹಲ್ಗಾಮ್ನ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದನೆಂದು ಶಂಕಿಸಲಾಗಿದ್ದ ಭಯೋತ್ಪಾದಕ ಆಸಿಫ್ ಶೇಖ್ನ ಮನೆಯಲ್ಲಿ ಪ್ರಬಲ ಸ್ಫೋಟ ನಡೆಸಿ ದ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದೆ.
ಲಭ್ಯವಿರುವ ಮಾಹಿತಿಗಳ ಪ್ರಕಾರ, ಪಹಲ್ಗಾಮ್ನ ಭಯೋತ್ಪಾದಕ ದಾಳಿ ನಂತರ ಪುಲ್ವಾಮಾದಲ್ಲಿ ಭಾರತೀಯ ಸೇನೆ, ಭದ್ರತಾ ಪಡೆಯಲು ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡು ಬಂದಿದ್ದವು. ಜೊತೆಗೆ ಅಪಾಯದ ಸನ್ನಿಹಿತವನ್ನು ಅರಿತ ಭದ್ರತಾ ಸಿಬ್ಬಂದಿ ಕೂಡಲೇ ಅಲ್ಲಿಂದ ಹಿಂದೆ ಸರಿದಿದ್ದರು, ಇದಾದ ಕೆಲವೇ ನಿಮಿಷಗಳಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಭಯೋತ್ಪಾದಕ ಆಸಿಫ್ ಶೇಖ್ಗೆ ಸಂಬಂಧಿಸಿದ್ದು ಎನ್ನಲಾದ ಮನೆ ಈ ಸ್ಫೋಟದಲ್ಲಿ ಸಂಪೂರ್ಣವಾಗಿ ನೆಲಸಮವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಜೊತೆ ಸಂಬಂಧ ಹೊಂದಿದ್ದ ಭಯೋತ್ಪಾದಕ ಆಸಿಫ್ ಶೇಖ್ನ ಮನೆ ನೆಲಸಮಗೊಂಡಿರುವ ವೀಡಿಯೋ ಸದ್ಯ ವೈರಲ್ ಆಗುತ್ತಿದೆ.
VIDEO | House of terrorist Asif Sheikh, who was allegedly involved in Pahalgam terror attack, was blown up in Jammu and Kashmir's Tral. More details awaited.
(Source: Third Party)
(Full video available on PTI Videos - https://t.co/n147TvrpG7) pic.twitter.com/KQLGoPRpgf
— Press Trust of India (@PTI_News) April 25, 2025
ಮತ್ತೊರ್ವ ಭಯೋತ್ಪಾದಕಣ ಮನೆಯೂ ಧ್ವಂಸ:
ಈ ಮಧ್ಯೆ ಬಿಜ್ಬೆಹರಾದ ಗುರಿಯಲ್ಲಿ ಎಲ್ಇಟಿ ಭಯೋತ್ಪಾದಕ ಆದಿಲ್ ಥೋಕರ್ನ ಮನೆಯನ್ನೂ ಕೂಡ ಧ್ವಂಸಗೊಳಿಸಲಾಗಿದೆ. ಈತನನ್ನು ಆದಿಲ್ ಗುರಿ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ. ಭದ್ರತಾ ಸಂಸ್ಥೆಗ ಪ್ರಕಾರ, ಇತ್ತೀಚೆಗೆ ನಡೆದ ಪಹಲ್ಗಾಮ್ ದಾಳಿಯಲ್ಲಿ ಆದಿಲ್ ಥೋಕರ್ ಕೂಡ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ.
ಏಪ್ರಿಲ್ 22, 2025ರಂದು ಜಮ್ಮು-ಕಾಶ್ಮೀರದ ಬೈಸರನ್ ಕಣಿವೆಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕ ಮಂಜುನಾಥ್ ಮತ್ತು ಭರತ್ ಭೂಷಣ್ ಸೇರಿದಂತೆ 26 ಮಂದಿಯನ್ನು ಬಲಿ ಪಡೆಯಲಾಗಿತ್ತು. 26 ಭಾರತೀಯರ ಬಲಿ ಪಡೆದಿದ್ದ ಈ ದುರ್ಘಟನೆಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರಲ್ಲಿ ಆಸಿಫ್ ಶೇಖ್ನ ಹೆಸರೂ ಕೂಡ ಕೇಳಿಬಂದಿತ್ತು. ಈ ಮಾರಕ ಭಯೋತ್ಪಾದಕ ದಾಳಿ ಭಾರತದಾದ್ಯಂತ ಆಘಾತವನ್ನುಂಟುಮಾಡಿತ್ತು. ಈ ದುರ್ಘಟನೆಗೆ ಎಲ್ಲೆಡೆ ತೀವ್ರವಾದ ವಿರೋಧ, ಖಂಡನೆ ವ್ಯಕ್ತವಾಗಿತ್ತು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.