ಮಹಿಳಾ ದೌರ್ಜನ್ಯ ಖಂಡಿಸಿ ಹುಟ್ಟುಹಬ್ಬ ಆಚರಿಸಿಕೊಳ್ಳದ ಸೋನಿಯಾ ಗಾಂಧಿ

ದೇಶಾದ್ಯಂತ ಅತ್ಯಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾನು ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಸೋನಿಯಾ ಗಾಂಧಿ ಘೋಷಿಸಿಕೊಂಡಿದ್ದಾರೆ.

Last Updated : Dec 9, 2019, 10:49 AM IST
ಮಹಿಳಾ ದೌರ್ಜನ್ಯ ಖಂಡಿಸಿ ಹುಟ್ಟುಹಬ್ಬ ಆಚರಿಸಿಕೊಳ್ಳದ ಸೋನಿಯಾ ಗಾಂಧಿ title=
File Image

ನವದೆಹಲಿ: ಇಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರ ಜನ್ಮದಿನ. ಆದರೆ ಅವರು ಈ ಬಾರಿ ಯಾವುದೇ ರೀತಿಯಲ್ಲೂ ಸಂಭ್ರಮಾಚರಣೆ ಮಾಡದರಿಲು ನಿರ್ಧರಿಸಿದ್ದಾರೆ.‌

ದೇಶಾದ್ಯಂತ ಅತ್ಯಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾನು ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಘೋಷಿಸಿಕೊಂಡಿದ್ದಾರೆ. ಆದರೂ ಅವರ ಪಕ್ಷದ ನಾಯಕರು, ವಿಪಕ್ಷದವರು, ಹಿತೈಷಿಗಳು ಸೋನಿಯಾ ಗಾಂಧಿ ಅವರಿಗೆ ಜನ್ಮ ದಿನದ ಶುಭಾಶಯ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಸುದೀರ್ಘ ಕಾಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಆಗಿದ್ದವರು. 15 ವರ್ಷ ಯುಪಿಎ ಅಧ್ಯಕ್ಷೆಯಾಗಿ ಕೂಡ ಕೆಲಸ ಮಾಡಿದ್ದಾರೆ. ಮನೆ ಬಾಗಿಲಿಗೆ ಬಂದ ಪ್ರಧಾನಿ ಪದವಿಯನ್ನು ತ್ಯಜಿಸಿ ತ್ಯಾಗಮಯಿ ಎಂದೇ ಹೆಸರಾಗಿದ್ದಾರೆ. ಸದ್ಯ ಎಐಸಿಸಿಯ ಹಂಗಾಮಿ ಅಧ್ಯಕ್ಷರಾಗಿದ್ದಾರೆ.

Trending News