ದೆಹಲಿ ದುರಂತ ಬೆನ್ನಲ್ಲೆ ಪಾಕಿಸ್ತಾನದ ನ್ಯಾಯಾಲಯದ ಹೊರಗೆ ಭೀಕರ ಕಾರ್‌ ಸ್ಫೋಟ, 12 ಸಾವು!

Pak Car blast : ದೆಹಲಿ ಕಾರ್‌ ಸ್ಫೋಟ ದೇಶದಾದ್ಯಂತ ಸಂಚನಲನ ಸೃಷ್ಟಿಸುತ್ತಿದೆ. ಅಲ್ಲದೆ, ಪ್ರಪಂಚದ ಗಮನ ಸೆಳೆದಿದೆ. ಇದರ ಬೆನ್ನಲ್ಲೇ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಕಾರ್‌ ಸ್ಪೋಟಗೊಂಡಿದ್ದು ಅಚ್ಚರಿ ಮೂಡಿಸಿದೆ.. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..

Written by - Krishna N K | Last Updated : Nov 11, 2025, 04:02 PM IST
    • ದೆಹಲಿ ಕಾರ್‌ ಸ್ಫೋಟ ದೇಶದಾದ್ಯಂತ ಸಂಚನಲನ ಸೃಷ್ಟಿಸುತ್ತಿದೆ.
    • ಇದರ ಬೆನ್ನಲ್ಲೇ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಕಾರ್‌ ಸ್ಪೋಟಗೊಂಡಿದೆ.
    • ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಈ ಸ್ಫೋಟ ಸಂಭವಿಸಿದೆ.
ದೆಹಲಿ ದುರಂತ ಬೆನ್ನಲ್ಲೆ ಪಾಕಿಸ್ತಾನದ ನ್ಯಾಯಾಲಯದ ಹೊರಗೆ ಭೀಕರ ಕಾರ್‌ ಸ್ಫೋಟ, 12 ಸಾವು!

Car blast in Pakistan Islamabad : ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಜಿಲ್ಲಾ ನ್ಯಾಯಾಲಯದ ಹೊರಗೆ ನವೆಂಬರ್ 11, ಮಂಗಳವಾರ ಮಧ್ಯಾಹ್ನ 12:30 ಕ್ಕೆ ಭಾರಿ ಸ್ಫೋಟ ಸಂಭವಿಸಿದ್ದು, 12 ಜನರು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿದ್ದಾರೆ. ನ್ಯಾಯಾಲಯದ ಸಂಕೀರ್ಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಈ ಸ್ಫೋಟ ಸಂಭವಿಸಿದೆ.

Add Zee News as a Preferred Source

ದೆಹಲಿಯಲ್ಲಿ ನಡೆದ ಕಾರ್ ಸ್ಫೋಟದಲ್ಲಿ 10 ಕ್ಕೂ ಹೆಚ್ಚು ಅಮಾಯಕರ ಬಲಿ ಪಡೆದುಕೊಂಡಿದೆ, ಅಲ್ಲದೆ, ಹಲವಾರು ಜನರು ಗಂಭೀರವಾಗಿ ಗಾಯಂಗೊಡಿದ್ದಾರೆ. ಇದರ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಇದೇ ಘಟನೆ ಹೋಲುವ ಬ್ಲಾಸ್ಟ್‌ ಸಂಭವಿಸಿದ್ದು ಸಂಚಲನ ಮೂಡಿಸಿದೆ..  

ಇದನ್ನೂ ಓದಿ:ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು: ಸಿಎಂ ಸಿದ್ದರಾಮಯ್ಯ

ಹೌದು.. ಪಾಕ್‌ ರಾಜಧಾನಿ ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಇಂದು ಮಧ್ಯಾಹ್ನ 12:30 ಕ್ಕೆ ಭಾರಿ ಸ್ಫೋಟ ಸಂಭವಿಸಿದೆ. ಈ ಅವಘಡದಲ್ಲಿ 12 ಜನರು ಸಾವನ್ನಪ್ಪಿದ್ದು, ಹಲವಾರು ಜನ ಗಾಯಗೊಂಡಿದ್ದಾರೆ.. ನ್ಯಾಯಾಲಯದ ಆವರಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. 

ನ್ಯಾಯಾಲಯದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಇದ್ದ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಸ್ಫೋಟದಲ್ಲಿ ಅನೇಕ ವಕೀಲರು ಮತ್ತು ಸಾಮಾನ್ಯ ಜನರು ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News