ಇಸ್ಲಾಮಾಬಾದ್: ಬಹುನಿರೀಕ್ಷಿತ ಕರ್ತಾರ್‌ಪುರ ಕಾರಿಡಾರ್ ಅನ್ನು ನವೆಂಬರ್ 9 ರಂದು ಸಾರ್ವಜನಿಕರಿಗೆ ತೆರೆಯಲಾಗುವುದು ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾನುವಾರ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

"ಕರ್ತಾರ್‌ಪುರ ಯೋಜನೆಯ ನಿರ್ಮಾಣ ಕಾರ್ಯಗಳು ಅಂತಿಮ ಹಂತಕ್ಕೆ ತಲುಪಿದ್ದು, 2019 ರ ನವೆಂಬರ್ 9 ರಂದು ಸಾರ್ವಜನಿಕರಿಗೆ ಮುಕ್ತವಾಗುವುದರಿಂದ ಪಾಕಿಸ್ತಾನವು ಜಗತ್ತಿನ ಎಲ್ಲೆಡೆಯಿಂದ ಸಿಖ್ಖರಿಗೆ ಬಾಗಿಲು ತೆರೆಯಲು ಸಜ್ಜಾಗಿದೆ" ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಕಟಿಸಿದ್ದಾರೆ.


ವಿಶ್ವದ ಅತಿದೊಡ್ಡ ಗುರುದ್ವಾರಕ್ಕೆ ಭಾರತ ಸೇರಿದಂತೆ ವಿಶ್ವದಾದ್ಯಂತದ ಸಿಖ್ಖರು ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದರು. ಕಾರಿಡಾರ್ ಕರ್ತಾರ್‌ಪುರದ ದರ್ಬಾರ್ ಸಾಹಿಬ್ ಅನ್ನು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ದೇವಾಲಯದೊಂದಿಗೆ ಸಂಪರ್ಕಿಸುತ್ತದೆ.


"ವಿಶ್ವದ ಅತಿದೊಡ್ಡ ಗುರುದ್ವಾರಕ್ಕೆ ಭಾರತ ಮತ್ತು ವಿಶ್ವದ ಇತರ ಭಾಗಗಳಿಂದ ಸಿಖ್ಖರು ಭೇಟಿ ನೀಡುತ್ತಾರೆ. ಇದು ಸಿಖ್ ಸಮುದಾಯದ ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ ಮತ್ತು ಸ್ಥಳೀಯ ಆರ್ಥಿಕತೆಯನ್ನು ಹೆಚ್ಚಿಸುತ್ತದೆ. ಇದರ ಪರಿಣಾಮವಾಗಿ ದೇಶಕ್ಕೆ ವಿದೇಶಿ ವಿನಿಮಯವನ್ನು ಗಳಿಸಿ ಉದ್ಯೋಗ ಸೃಷ್ಟಿಸುತ್ತದೆ. ಪ್ರಯಾಣ ಮತ್ತು ಆತಿಥ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಮೂಲಕ ಪಾಕಿಸ್ತಾನದಲ್ಲಿ ಧಾರ್ಮಿಕ ಪ್ರವಾಸೋದ್ಯಮ ಹೆಚ್ಚುತ್ತಿದೆ. ಈ ಹಿಂದೆ ಬೌದ್ಧ ಭಿಕ್ಷುಗಳು ಧಾರ್ಮಿಕ ಆಚರಣೆಗಳಿಗಾಗಿ ವಿವಿಧ ತಾಣಗಳಿಗೆ ಭೇಟಿ ನೀಡಿದ್ದರು. ನಂತರ # ಕರ್ತಾರ್‌ಪುರ ಕಾರಿಡಾರ್ ತೆರೆಯಲಾಯಿತು"ಎಂದು ಪಾಕಿಸ್ತಾನ ಪ್ರಧಾನಿ ಹೇಳಿದರು.


ಈ ಕಾರಿಡಾರ್ ಭಾರತೀಯ ಯಾತ್ರಿಕರಿಗೆ ವೀಸಾ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಲಿದ್ದು, 1522 ರಲ್ಲಿ ಸಿಖ್  ಸಂಸ್ಥಾಪಕ ಗುರುನಾನಕ್ ದೇವ್ ಅವರು ಸ್ಥಾಪಿಸಿದ ಕರ್ತಾರ್‌ಪುರ್ ಸಾಹಿಬ್‌ಗೆ ಭೇಟಿ ನೀಡಲು ಅನುಕೂಲವಾಗಲಿದೆ. ಈ ಕಾರಿಡಾರ್ ಎರಡು ನೆರೆಯ ದೇಶಗಳ ನಡುವಿನ ಮೊದಲ ವೀಸಾ ಮುಕ್ತ ಕಾರಿಡಾರ್ ಆಗಲಿದೆ ಎಂದು ದುನ್ಯಾ ನ್ಯೂಸ್ ವರದಿ ಮಾಡಿದೆ.


ಏತನ್ಮಧ್ಯೆ, 550 ನೇ ಜನ್ಮ ದಿನಾಚರಣೆಯ ಮೂರು ದಿನಗಳ ಮೊದಲು ನವೆಂಬರ್ 9 ರಂದು ಪ್ರಧಾನಿ ಇಮ್ರಾನ್ ಖಾನ್ ಈ ಯೋಜನೆಯನ್ನು ಉದ್ಘಾಟಿಸಲಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಹೇಳಿದ್ದಾರೆ.