ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸಿದೆ. ಇಂದು ಬೆಳಿಗ್ಗೆ 11: 30 ರ ಸುಮಾರಿಗೆ ರಾಜೌರಿ ಜಿಲ್ಲೆಯ ಸುಂದರ್‌ಬಾನಿ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘನೆ ನಡೆದಿದೆ.


COMMERCIAL BREAK
SCROLL TO CONTINUE READING

ಸುಂದರ್‌ಬಾನಿ ವಲಯದಲ್ಲಿ ಸಣ್ಣ ಶಸ್ತ್ರಾಸ್ತ್ರಗಳನ್ನು ಮತ್ತು ಗಾರೆ ಶೆಲ್ ದಾಳಿ ಮಾಡುವ ಮೂಲಕ ಪಾಕಿಸ್ತಾನವು ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಚಾಲನೆ ನೀಡಿತು. ಈ ಮಧ್ಯೆ, ಪಾಕಿಸ್ತಾನದ ಈ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆಯು ಸೂಕ್ತ ಉತ್ತರ ನೀಡುತ್ತಿದೆ.


ಇದಕ್ಕೂ ಮೊದಲು ಅಕ್ಟೋಬರ್ 20 ರಂದು ತಾಂಗ್‌ಧಾರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ನಡೆಸಿದ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಯಲ್ಲಿ ಇಬ್ಬರು ಭಾರತೀಯ ಸೈನಿಕರು ಮತ್ತು ಒಬ್ಬ ನಾಗರಿಕ ಸಾವನ್ನಪ್ಪಿದ್ದರು. ಇದರ ನಂತರ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶದಲ್ಲಿ ನೆಲೆಗೊಂಡಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರೀ ಫೈರ್ಪವರ್ ಬಳಸಿ ಭಾರತೀಯ ಸೇನೆಯು ದಾಳಿ ನಡೆಸಿತ್ತು.


ಒಳನುಸುಳುವವರನ್ನು ಭಾರತದ ಕಡೆಗೆ ತಳ್ಳಲು ಪಾಕಿಸ್ತಾನ ಸೇನೆಯಿಂದ ಕದನ ವಿರಾಮ ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.


ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವುದಾಗಿ ಭಾರತ ಸರ್ಕಾರ ಆಗಸ್ಟ್ 5 ರಂದು ಘೋಷಿಸಿದಾಗಿನಿಂದ, ಪಾಕಿಸ್ತಾನವು ಆಗಾಗ್ಗೆ ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆಗೆ ಮಾಡುತ್ತಿದೆ. ಭಾರತೀಯ ಸೇನೆ ಕೂಡ ಇದಕ್ಕೆ ಸೂಕ್ತ ಪ್ರತ್ಯುತ್ತರ ನೀಡುತ್ತಾ ಬಂದಿದೆ.