ಮತ್ತೆ ಜಮ್ಮು-ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್; ತಕ್ಕ ಪ್ರತ್ಯುತ್ತರ ನೀಡಿದ ಪಾಕ್
ಕಳೆದ ಮೂರು ದಿನಗಳಲ್ಲಿ ಮೂರನೇ ಬಾರಿಗೆ ಪಾಕ್ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಈ ಹಿಂದೆ ಪೂಂಚ್ ಜಿಲ್ಲೆಯ ಮೆಂಧಾರ್ ಮತ್ತು ಬಾಲಾಕೋಟ್ ಗಡಿ ನಿಯಂತ್ರಣ ರೇಖೆಯ ಬಳಿ ಫೈರಿಂಗ್ ನಡೆಸಿತ್ತು.
ನವದೆಹಲಿ: ಜಮ್ಮು-ಕಾಶ್ಮೀರದ ಶಹಪುರ್ ಮತ್ತು ಕಿರ್ನಿ ಸೆಕ್ಟರ್ ಗಳಲ್ಲಿ ಮಂಗಳವಾರ ಬೆಳಿಗ್ಗೆ ಪಾಕಿಸ್ಥಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು ಭಾರೀ ಗುಂಡಿನ ದಾಳಿ ನಡೆಸಿದೆ.
ಪಾಕಿಸ್ಥಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ.
ಕಳೆದ ಮೂರು ದಿನಗಳಲ್ಲಿ ಮೂರನೇ ಬಾರಿಗೆ ಪಾಕ್ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಈ ಹಿಂದೆ ಪೂಂಚ್ ಜಿಲ್ಲೆಯ ಮೆಂಧಾರ್ ಮತ್ತು ಬಾಲಾಕೋಟ್ ಗಡಿ ನಿಯಂತ್ರಣ ರೇಖೆಯ ಬಳಿ ಫೈರಿಂಗ್ ನಡೆಸಿತ್ತು.
ಅಪ್ರಚೋದಿತ ಗುಂಡಿನ ದಾಳಿಯಿಂದಾಗಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ. ಏತನ್ಮಧ್ಯೆ, ಶನಿವಾರ ಸಹ ಶಹಪುರ್ ಮತ್ತು ಕಿರ್ನಿ ವಲಯಗಳಲ್ಲಿ ಪಾಕ್ ನಡೆಸಿದ ಗುಂಡಿನ ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ.