ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆ ಮತ್ತೆ ತನ್ನ ಅಟ್ಟಹಾಸ ಮೆರೆದಿದ್ದು, ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಜವಾನ್ ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ರಾಜೌರಿ ಜಿಲ್ಲೆಯ LoC ನ ಸುಂದರ್ಬಾನಿ ಸೆಕ್ಟರ್ನಲ್ಲಿ ಪಾಕಿಸ್ತಾನದಿಂದ ಗುಂಡಿನ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸುಂದರ್ಭನ್ ನಲ್ಲಿ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿರುವ ಪಾಕಿಸ್ತಾನ ಫೈರಿಂಗ್ ನಡೆಸಿದೆ. ಸೋಮವಾರ ಬೆಳಿಗ್ಗೆ ಪಾಕಿಸ್ತಾನದ ಪಡೆಗಳು LoC ನ ಉದ್ದಗಲಕ್ಕೂ ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ. ಭಾರತಿಯ ಸೇನೆ ಪ್ರತೀಕಾರವಾಗಿ ಗುಂಡಿನ ದಾಳಿ ಮುಂದುವರೆಸಿವೆ. ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾನೆ ಎಂದು ಸುದ್ದಿ ಸಂಸ್ಥೆ IANS ವರದಿ ಮಾಡಿದೆ.


ಪಾಕಿಸ್ತಾನ ಪದೇ ಪದೇ ಎರಡು ದೇಶಗಳ ನಡುವೆ ಕದನ ವಿರಾಮದ ಒಪ್ಪಂದವನ್ನು ಉಲ್ಲಂಘಿಸುತ್ತಿದೆ. ಎರಡೂ ದೇಶಗಳ ನಡುವಿನ ಇತ್ತೀಚಿನ ಉದ್ವಿಗ್ನತೆಗಳ ಹೊರತಾಗಿಯೂ, ಪಾಕಿಸ್ತಾನ ತನ್ನ ಮಣ್ಣಿನಲ್ಲಿ ಭಯೋತ್ಪಾದನೆ ಸಂಘಟನೆಗಳ ಬೆಂಬಲಕ್ಕೆ ನಿಂತಿದ್ದು, ಭಯೋತ್ಪಾದಕರಿಗೆ ಜಮ್ಮು ಮತ್ತು ಕಾಶ್ಮೀರವನ್ನು ಒಳಸೇರಿಸಲು ಸಹಾಯ ಮಾಡಲು ಹಣ, ಸಾಮಗ್ರಿ ಒದಗಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.