ಶ್ರೀನಗರ: ಕದನ ವಿರಾಮ ಉಲ್ಲಂಘನೆಯ ಮತ್ತೊಂದು ಘಟನೆಯಲ್ಲಿ ಪಾಕಿಸ್ತಾನ ಪಡೆಗಳು ನಿಯಂತ್ರಣ ರೇಖೆ ಬಳಿ ಜಮ್ಮು ಮತ್ತು ಕಾಶ್ಮೀರದ ಮೆಂಧರ್ ಸೆಕ್ಟರ್‌ನಲ್ಲಿ ಶುಕ್ರವಾರ ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿದ್ದಾರೆ.


COMMERCIAL BREAK
SCROLL TO CONTINUE READING

ವರದಿಗಳ ಪ್ರಕಾರ, ಪಾಕಿಸ್ತಾನದ ಸೈನ್ಯದ ಅಪ್ರಚೋದಿತ ಮತ್ತು ವಿವೇಚನೆಯಿಲ್ಲದ ಗುಂಡಿನ ದಾಳಿಯಲ್ಲಿ ಜವಾನ್ ಗಾಯಗೊಂಡಿದ್ದಾರೆ.


ಜಮ್ಮು ಮತ್ತು ಕಾಶ್ಮೀರದ ತಂಗ್ಧರ್ ಸೆಕ್ಟರ್‌ನಲ್ಲಿ ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಇದರಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.


ಪಾಕಿಸ್ತಾನದ ಪಡೆಗಳು ಅಪ್ರಚೋದಿತ ಗುಂಡಿನ ದಾಳಿಯನ್ನು ಆಶ್ರಯಿಸಿದ್ದು, ಇದರ ಪರಿಣಾಮವಾಗಿ ಕೆಲವರು ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ಸೇನೆ ತಿಳಿಸಿದೆ. ಅಷ್ಟೇ ಅಲ್ಲದೆ ಆಸ್ತಿಗಳಿಗೂ ಹಾನಿಯಾಗಿದೆ. ಭಾರತೀಯ ಸೇನೆಯು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಆಕ್ರಮಣಕ್ಕೆ ಪರಿಣಾಮಕಾರಿಯಾಗಿ ಪ್ರತೀಕಾರ ತೀರಿಸಿದೆ  ಎಂದು ಸೇನಾ ಮೂಲಗಳು ತಿಳಿಸಿವೆ. 


ಗುಂಡಿನ ದಾಳಿಯಲ್ಲಿ ಮೃತಪಟ್ಟ ಮಹಿಳೆಯನ್ನು ಹಮೀದಾ ಫಾತಿಮಾ ಎಂದು ಗುರುತಿಸಲಾಗಿದೆ ಎಂದು ಜೆ & ಕೆ ಪೊಲೀಸರು ತಿಳಿಸಿದ್ದಾರೆ.


ಕಳೆದ ವಾರ ಶನಿವಾರ, ಉಗ್ರರ ಒಳನುಸುಳುವಿಕೆ ಪ್ರಯತ್ನಗಳಿಗೆ ಸಹಾಯ ಮಾಡಲು ಪಾಕಿಸ್ತಾನ ಪಡೆಗಳು ತಂಗ್‌ಧಾರ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದರು. ಈ ಸಮಯದಲ್ಲಿ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಸಾವನ್ನಪ್ಪಿದರು ಮತ್ತು ಇತರ ಮೂವರು ಗಾಯಗೊಂಡಿದ್ದಾರೆ.


ಭಾನುವಾರ, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು 6-10 ಪಾಕಿಸ್ತಾನಿ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಪ್ರತೀಕಾರದ ಕ್ರಮವಾಗಿ ತಂಗ್ಧರ್ ವಲಯದ ಎದುರು ನಿಯಂತ್ರಣ ರೇಖೆಯ ಉದ್ದಕ್ಕೂ ಮೂರು ಭಯೋತ್ಪಾದಕ ಶಿಬಿರಗಳನ್ನು ಭಾರತೀಯ ಸೇನೆಯು ನಾಶಪಡಿಸಿದೆ ಎಂದು ಹೇಳಿದರು.