ಕುಪ್ವಾರಾ: ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯ ತಂಗ್‌ಧಾರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆಯು ಗುರುವಾರ ಕದನ ವಿರಾಮ ಉಲ್ಲಂಘಿಸಿದೆ.


COMMERCIAL BREAK
SCROLL TO CONTINUE READING

ಪಾಕಿಸ್ತಾನ ಸೇನೆಯ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆಯು ಪ್ರತೀಕಾರ ತೀರಿಸುತ್ತಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.


ಅಕ್ಟೋಬರ್ 20 ರಂದು ತಂಗ್‌ಧಾರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ನಡೆಸಿದ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಯಲ್ಲಿ ಇಬ್ಬರು ಭಾರತೀಯ ಸೈನಿಕರು ಮತ್ತು ಒಬ್ಬ ನಾಗರಿಕ ಸಾವನ್ನಪ್ಪಿದ್ದರು. ಇದಾದ ಬಳಿಕ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶದಲ್ಲಿ ನೆಲೆಗೊಂಡಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಸೇನಾಪಡೆ ಬಳಸಿ ಭಾರತೀಯ ಸೇನೆಯು ದಾಳಿ ನಡೆಸಿತ್ತು.