ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೇಲೆ ಗುಂಡಿನ ದಾಳಿ..!

BJP SC Morcha General Secretary shot : ಪಂಜಾಬ್‌ನ ಅಮೃತಸರದ ಜಂಡಿಯಾಲ ಗುರು ಪ್ರದೇಶದಲ್ಲಿ ಪಂಜಾಬ್ ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಗುಂಡು ಅವರ ಗಲ್ಲಕ್ಕೆ ತಗುಲಿದ ಮುಖಕ್ಕೆ ಗಂಭೀರ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Written by - Krishna N K | Last Updated : Apr 17, 2023, 09:19 AM IST
  • ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೇಲೆ ಗುಂಡಿನ ದಾಳಿ.
  • ಬಲ್ವಿಂದರ್ ಗಿಲ್ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
  • ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೇಲೆ ಗುಂಡಿನ ದಾಳಿ..! title=

Balwinder Gill shot : ಪಂಜಾಬ್ ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಲ್ವಿಂದರ್ ಗಿಲ್ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಈ ಘಟನೆ ಅಮೃತಸರದ ಜಂಡಿಯಾಲಾ ಗುರು ಪ್ರದೇಶದಲ್ಲಿ ಜರುಗಿದೆ. ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಂಡು ಗಲ್ಲಕ್ಕೆ ತಗುಲಿ ಮುಖಕ್ಕೆ ಗಾಯವಾಗಿದೆ, ಕೆಳ ಮೂಳೆಯೂ ಮುರಿದಿದೆ. ಆದ್ರೆ, ಪ್ರಾಣಾಪಾಯದಿಂದ ಬಲ್ವಿಂದರ್‌ ಗಿಲ್‌ ಅವರು ಪಾರಾಗಿದ್ದಾರೆ ಎಂದು ಕೆಡಿ ಆಸ್ಪತ್ರೆಯ ಡಾ.ರಣಧೀರ್ ತಿಳಿಸಿದ್ದಾರೆ.  ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿತ್ತು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ತೊರೆದು ಜೆಡಿಎಸ್ ಸೇರಲು ಮುಂದಾದ ಸಂಸದ ಕರಡಿ ಸಂಗಣ್ಣ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನದ ನಂತರವಷ್ಟೇ ದಾಳಿಯ ಹಿಂದಿನ ಉದ್ದೇಶ ತಿಳಿದು ಬರಲಿದೆ. ದಾಳಿಕೋರರು ಬೈಕ್ ಬಳಸಿದ್ದರ ಬಗ್ಗೆ ಅಧಿಕಾರಿಗಳು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News