ಇಂದು 'ಪರೀಕ್ಷಾ ಪೇ ಚರ್ಚಾ'ದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿದ್ಯಾರ್ಥಿಗಳೊಂದಿಗೆ 'ಪರೀಕ್ಷಾ ಪೇ ಚರ್ಚಾ' ನಡೆಸಲಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಟಾಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

Updated: Jan 20, 2020 , 06:27 AM IST
ಇಂದು 'ಪರೀಕ್ಷಾ ಪೇ ಚರ್ಚಾ'ದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿದ್ಯಾರ್ಥಿಗಳೊಂದಿಗೆ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದಲ್ಲಿ 'ಪರೀಕ್ಷೆಯ ಸಮಯದಲ್ಲಿ ಹೇಗೆ ಒತ್ತಡ ಕಡಿಮೆ ಮಾಡಿಕೊಳ್ಳಬಹುದು ಎಂದು ಚರ್ಚೆ' ನಡೆಸಲಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಭಾಗವಹಿಸಲಿದ್ದಾರೆ. 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮವು ಇಂದು ಬೆಳಿಗ್ಗೆ 11 ಗಂಟೆಗೆ ಟಾಕಟೋರಾ ಕ್ರೀಡಾಂಗಣದಲ್ಲಿ  ನಡೆಯಲಿದೆ. ಈ ಸಮಯದಲ್ಲಿ ಈ ಕಾರ್ಯಕ್ರಮದಲ್ಲಿ, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿಯೊಂದಿಗೆ ಮಾತನಾಡಲು ಮತ್ತು ಪ್ರಶ್ನೆಗಳನ್ನು ಕೇಳಲು ಅವಕಾಶ ಸಿಗುತ್ತದೆ. ಇದು 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ಮೂರನೇ ಆವೃತ್ತಿಯಾಗಿದೆ. ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ನೇರವಾಗಿ  ತಮ್ಮ ಪ್ರಶ್ನೆಗಳನ್ನು ಪ್ರಧಾನ ಮಂತ್ರಿಗೆ ಕೇಳುವ ಸೌಲಭ್ಯವಿದೆ. ಒತ್ತಡರಹಿತವಾಗಿ ವಿದ್ಯಾರ್ಥಿಗಳು ಹೇಗೆ ಪರೀಕ್ಷೆಯನ್ನು ಎದುರಿಸಬಹುದು ಎಂಬುದರ ಬಗ್ಗೆ ಸಲಹೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅಂಗವಿಕಲ ವಿದ್ಯಾರ್ಥಿಗಳೊಂದಿಗೆ ವಿಶೇಷವಾಗಿ ಚರ್ಚಿಸಲಿದ್ದಾರೆ. ಅವರನ್ನು ಇಲ್ಲಿಗೆ ಕರೆತರಲು ಮತ್ತು ಅವರ ಆಸನಗಳಿಗಾಗಿ ವಿಶೇಷ ವ್ಯವಸ್ಥೆ ಕೂಡ ಮಾಡಲಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಪ್ರಕಾರ, ಅಂಗವಿಕಲ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ. ನಿಶಾಂಕ್ ಅವರು ವಿಕಲಚೇತನ ವಿದ್ಯಾರ್ಥಿಗಳು ಪ್ರಧಾನಿ ಕಾರ್ಯಕ್ರಮಕ್ಕೆ ನೇರವಾಗಿ ಸಂಪರ್ಕ ಹೊಂದಿದ್ದಾರೆ ಮತ್ತು ಈ ವಿದ್ಯಾರ್ಥಿಗಳು ನೇರವಾಗಿ ಪ್ರಧಾನಮಂತ್ರಿಯೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿಗಳ ಪರೀಕ್ಷೆಗಳು ಒತ್ತಡರಹಿತವಾಗಿರಬೇಕು ಎಂದು ಪ್ರಧಾನಿ ಮೋದಿ ಬಯಸುತ್ತಾರೆ ಎಂದು ಹೇಳಿದರು.

ನಿಶಾಂಕ್ ತಮ್ಮ ವಿಡಿಯೋ ಸಂದೇಶದಲ್ಲಿ, "ಜನವರಿ 20-2020 ರಂದು 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೇಶಾದ್ಯಂತದ ಎಲ್ಲಾ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಆಹ್ವಾನಿಸಿದ್ದಾರೆ". ''ಪರೀಕ್ಷಾ ಪೇ ಚರ್ಚಾ'' ಕಾರ್ಯಕ್ರಮದ ದೃಷ್ಟಿಯಿಂದ ಮಾನವ ಸಂಪನ್ಮೂಲ ಅಭಿವೃದ್ಧಿ ರಾಜ್ಯ ಸಚಿವ ಸಂಜಯ್ ಧೋತ್ರೆ ಪಶ್ಚಿಮ ಬಂಗಾಳದ ಒಡಿಶಾ, ಅಸ್ಸಾಂ, ತ್ರಿಪುರಕ್ಕೆ ತೆರಳಿ ವಿದ್ಯಾರ್ಥಿಗಳೊಂದಿಗೆ ವಿಶೇಷ ಸಭೆ ನಡೆಸಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳ ಜೀವನದ ವಿವಿಧ ಆಯಾಮಗಳ ಕುರಿತು ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸಂವಹನ ನಡೆಸಿದರು.

ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ ಯಾವುದೇ ರೀತಿಯ ಪರೀಕ್ಷೆಯ ಒತ್ತಡವನ್ನು ತೆಗೆದುಕೊಳ್ಳಬೇಡಿ. ಜನವರಿ 20 ರಂದು ನಡೆಯಲಿರುವ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮವನ್ನು ವೀಕ್ಷಿಸಿ, ಇದರಿಂದ ನಿಮಗ ಒತ್ತಡ ರಹಿತ ಪರೀಕ್ಷೆಗೆ ಸಲಹೆ ಸೂಚನೆಗಳು ಸಿಗಲಿವೆ ಎಂದು ಧೋತ್ರೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಇದರಲ್ಲಿ ಪರೀಕ್ಷಾ ಸಂಬಂಧಿತ ವಿಷಯಗಳ ಕುರಿತು ಪ್ರಧಾನಿ ದೇಶಾದ್ಯಂತ ಎಲ್ಲಾ ರಾಜ್ಯಗಳಿಂದ ಬರುವ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಪ್ರಧಾನಮಂತ್ರಿಯವರ ಈ ಚರ್ಚೆ ವಿದ್ಯಾರ್ಥಿಗಳಲ್ಲಿ ಜನಪ್ರಿಯವಾಗಿದೆ ಮತ್ತು ಕಳೆದ ವರ್ಷಕ್ಕಿಂತ ಈ ಬಾರಿ 250 ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಚರ್ಚಿಸಲು ತಮ್ಮನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ''ಪರೀಕ್ಷಾ ಪೇ ಚರ್ಚಾ'' ಕಾರ್ಯಕ್ರಮದಲ್ಲಿ ಭಾರತೀಯ ವಿದ್ಯಾರ್ಥಿಗಳಲ್ಲದೆ, ವಿಶ್ವದ ವಿವಿಧ ದೇಶಗಳ ವಿದ್ಯಾರ್ಥಿಗಳು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದಾರೆ ಎಂದು ತಿಳಿದುಬಂದಿದೆ. 

ಜನಪ್ರಿಯ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ಮೊದಲ ಆವೃತ್ತಿ ಫೆಬ್ರವರಿ 16, 2018 ರಂದು ಮತ್ತು ಎರಡನೇ ಆವೃತ್ತಿ 2019 ರ ಜನವರಿ 29 ರಂದು ನಡೆಯಿತು.