ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ; ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ
17ನೇ ಲೋಕಸಭೆಯ ಕೊನೆಯ ಅಧಿವೇಶನವು ಜ.31ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ. ಜಂಟಿ ಅಧಿವೇಶನಗಳನ್ನು ಉದ್ದೇಶಿಸಿ ಗೌರವಾನ್ವಿತ ರಾಷ್ಟ್ರಪತಿಗಳ ಭಾಷಣದೊಂದಿಗೆ ಕಲಾಪಗಳು ಆರಂಭವಾಗಲಿದೆ. ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.
ನವದೆಹಲಿ: 2024ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿರುವಾಗ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆಗೆ ಮೂಹೂರ್ತ ಫಿಕ್ಸ್ ಮಾಡಿದೆ. ಜನವರಿ 31ರಿಂದ ಫೆಬ್ರವರಿ 9ರವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. 17ನೇ ಲೋಕಸಭೆಯ ಕೊನೆಯ ಅಧಿವೇಶನವೂ ಇದಾಗಿದೆ. ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ‘ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವುದರೊಂದಿಗೆ ಮಧ್ಯಂತರ ಬಜೆಟ್ ಅಧಿವೇಶನ ಆರಂಭವಾಗಲಿದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಡಾ.ಪುನೀತ್ ರಾಜ್‍ಕುಮಾರ್ ಪುತ್ಥಳಿಗೆ ಕಿಡಿಗೇಡಿಗಳಿಂದ ಹಾನಿ
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಹ್ಲಾದ್ ಜೋಶಿ, ‘17ನೇ ಲೋಕಸಭೆಯ ಕೊನೆಯ ಅಧಿವೇಶನವು ಜನವರಿ 31ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ. ಜಂಟಿ ಅಧಿವೇಶನಗಳನ್ನು ಉದ್ದೇಶಿಸಿ ಗೌರವಾನ್ವಿತ ರಾಷ್ಟ್ರಪತಿಗಳ ಭಾಷಣದೊಂದಿಗೆ ಕಲಾಪಗಳು ಆರಂಭವಾಗಲಿದೆ. ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ’ ಎಂದು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿರುವ ಕಾರಣ ಕೇಂದ್ರ ಬಜೆಟ್‌ನಲ್ಲಿ ದೇಶದ ಜನರಿಗಾಗಿ ಪ್ರಧಾನಿ ಮೋದಿ ಸರ್ಕಾರ ಹಲವು ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ಹೀಗಾಗಿ ಇದು ಚುನಾವಣಾ ಬಜೆಟ್ ಆಗಿರಲಿದೆ ಅಂತಾ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಫೆಬ್ರವರಿ 1ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮೇಲೆ ಭಾರೀ ನಿರೀಕ್ಷೆಗಳು ಮೂಡಿವೆ.
Yuva Nidhi: ಕಾಂಗ್ರೆಸ್ ಬದ್ಧತೆಯುಳ್ಳ ಪಕ್ಷ, ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ- ರಣದೀಪ್ ಸಿಂಗ್ ಸುರ್ಜೇವಾಲ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.