ನವದೆಹಲಿ: ಉತ್ತರ ಪ್ರದೇಶ, ಬಿಹಾರ ಮತ್ತು ಗುಜರಾತ್‌ನ ಪ್ರತ್ಯೇಕ ಸ್ಥಳಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ತಿಳಿಸಿದೆ.


COMMERCIAL BREAK
SCROLL TO CONTINUE READING

ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


"ಮಧ್ಯಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್, ಸೌರಾಷ್ಟ್ರ, ಕಚ್, ಕೊಂಕಣ ಮತ್ತು ಗೋವಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ" ಎಂದು ಐಎಮ್‌ಡಿ ತನ್ನ ಅಖಿಲ ಭಾರತ ಹವಾಮಾನ ಎಚ್ಚರಿಕೆ ಬುಲೆಟಿನ್ ನಲ್ಲಿ ಹೇಳಿದೆ.


ಐಎಂಡಿ ನೀಡಿರುವ ಮುನ್ಸೂಚನೆ ಪ್ರಕಾರ ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಒಡಿಶಾದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.


ಗುಜರಾತ್ ಕರಾವಳಿಯಲ್ಲಿ ಉಬ್ಬರವಿಳಿತ ಹೆಚ್ಚಾಗುವ ಸಾಧ್ಯತೆಯಿದ್ದು, ಮುಂದಿನ ಕೆಲವು ದಿನಗಳವರೆಗೆ ಈ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.