ಬೆಂಗಳೂರು: ಟಿಎಂಸಿ ನಾಯಕ ಪವನ್ ಕೆ ವರ್ಮಾ ಶುಕ್ರವಾರ ಪಕ್ಷದ ಅಧ್ಯಕ್ಷರಾದ ಮಮತಾ ಬ್ಯಾನರ್ಜೀ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಟ್ವೀಟ್ ಮಾಡಿರುವ ವರ್ಮಾ 'ದಯವಿಟ್ಟು ತೃಣಮೂಲದ ಕಾಂಗ್ರೆಸ್ ಗೆ ರಾಜೀನಾಮೆ ನೀಡುತ್ತಿರುವುದನ್ನು ಸ್ವೀಕರಿಸಿ.ನನಗೆ ನೀಡಿದ ಆತ್ಮೀಯ ಸ್ವಾಗತ ಮತ್ತು ನಿಮ್ಮ ಪ್ರೀತಿ ಮತ್ತು ಸೌಜನ್ಯಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ.ನಿಮ್ಮ ಜೊತೆ ಸಂಪರ್ಕದಲ್ಲಿರಲು ಬಯಸುತ್ತೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೋವಿಡ್‌ ಲಸಿಕೆಯ ಮೂರನೇ ಡೋಸ್‌ ಪಡೆದವರು 17% ಮಾತ್ರ : ಸಚಿವ ಸುಧಾಕರ್‌


ಜೆಡಿಯುನ ಮಾಜಿ ಸಂಸದ ಪವನ್ ಕೆ ವರ್ಮಾ ಅವರು ಕಳೆದ ವರ್ಷ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಪ್ರತಿಪಕ್ಷಗಳನ್ನು ಬಲಪಡಿಸಲು ಕೆಲಸ ಮಾಡುವುದು ಇಂದಿನ ಅಗತ್ಯ ಎಂದು ಹೇಳಿದ್ದನ್ನು ಸ್ಮರಿಸಬಹುದು.ರಾಜಕೀಯ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಪಕ್ಷಗಳನ್ನು ಬಲಪಡಿಸುವುದು ಅನಿವಾರ್ಯವಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.


ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಬಿಜೆಪಿಯ ಮೈತ್ರಿಕೂಟದ ಮೇಲೆ ದಾಳಿಯನ್ನು ಹೆಚ್ಚಿಸಿದ ನಂತರ ವರ್ಮಾ ಮತ್ತು ಪ್ರಶಾಂತ್ ಕಿಶೋರ್ ಅವರನ್ನು ಕಳೆದ ವರ್ಷ ಜೆಡಿಯುನಿಂದ ಹೊರಹಾಕಲಾಯಿತು.


ಇದನ್ನೂ ಓದಿ: ವೀರಪ್ಪನ್ ತಾಣವಾಗಿದ್ದ ಈ ಊರು ಇಂದು ಯೋಧರ ಗ್ರಾಮ.. ಇಲ್ಲಿದೆ ಸೇನಾ ತರಬೇತಿ ಅಕಾಡೆಮಿ


ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಜೊತೆಗಿನ ಜೆಡಿಯು ಮೈತ್ರಿಯನ್ನು ಮುರಿದು ನಿತೀಶ್ ಕುಮಾರ್ ಮಹಾಘಟಬಂಧನ್‌ಗೆ ಮರಳಿದ ಕೆಲವು ದಿನಗಳ ನಂತರ ಅವರ ರಾಜೀನಾಮೆ ಬಂದಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.