ನವದೆಹಲಿ: ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಜಯವಾಡಾ, ತಿರುಪತಿ ಮತ್ತು ಹೈದರಾಬಾದ್ನಲ್ಲಿ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಹಾಗೂ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಜಂಟಿ ಚುನಾವಣಾ ರ‍್ಯಾಲಿ ನಡೆಸಲು ಭರ್ಜರಿ ತಯಾರಿ ನಡೆಸಲಾಗಿದೆ.


COMMERCIAL BREAK
SCROLL TO CONTINUE READING

ಮಾಯಾವತಿ ಮತ್ತು ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಎಡ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಜನಸೇನಾ ಪಕ್ಷದ ಮೂಲಗಳಿಂದ ಮಾಹಿತಿ ಲಭಿಸಿದೆ.



ಮಾಯಾವತಿ ಮಂಗಳವಾರ ಆಂಧ್ರ ಪ್ರದೇಶದ ವಿಶಾಖ ಪಟ್ಟಣಂಗೆ ಆಗಮಿಸಿದ್ದು, ಗುರುವಾರ ಪವನ್ ಕಲ್ಯಾಣ್ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. 


ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಜನ ಸೇನಾ, ಮಾನಾ ಪಕ್ಷದೊಂದಿಗೆ ಮೈತ್ರಿಯೊಂದಿಗೆ ಸ್ಪರ್ಧಿಸುತ್ತಿರುವ ಬಹುಜನ ಸಮಾಜ ಪಕ್ಷ 25 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಅಲ್ಲದೆ, 175 ವಿಧಾನಸಭಾ ಕ್ಷೇತ್ರಗಳಲ್ಲಿ 21 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಮಾಯಾವತಿ ಮತ್ತು ಪವನ್ ಕಲ್ಯಾಣ್ ಗುರುವಾರ ತಿರುಪತಿಯಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎನ್ನಲಾಗಿದೆ.