ಕಾಂಗ್ರೆಸ್ ಪಕ್ಷವನ್ನು ಜನ `ಬೇಲ್ ಗಾಡಿ` ಎಂದು ಟೀಕಿಸುತ್ತಿದ್ದಾರೆ: ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷವನ್ನು ಜನರು ಬೇಲ್ ಗಾಡಿ ಎಂದು ಲೇವಡಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.
ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಮತ್ತೆ ಟೀಕಾಪ್ರಹಾರ ಮಾಡಿದ್ದು, ಕಾಂಗ್ರೆಸ್ ಪಕ್ಷವನ್ನು 'ಬೇಲ್ ಗಾಡಿ' ಎಂದು ಕರೆದಿದ್ದಾರೆ.
ರಾಜಸ್ಥಾನದ ಜೈಪುರದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷದ ಹಲವು ನಾಯಕರು ಜಾಮೀನು ಪಡೆದು ಹೊರಗಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷವನ್ನು ಜನರು ಬೇಲ್ ಗಾಡಿ ಎಂದು ಲೇವಡಿ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜಸ್ಥಾನ ಮುಖ್ಯಮಂತ್ರಿ ವಸುಂಧರ ರಾಜೆ ಅವರ ಆಡಳಿತವನ್ನು ಶ್ಲಾಘಿಸಿದ ಮೋದಿ, 2013ರಲ್ಲಿ ವಸುಂದರಾ ರಾಜೇ ಅವರು ಅಧಿಕಾರ ಸ್ವೀಕಾರ ಮಾಡಿದ್ದಾಗ ರಾಜ್ಯದಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿಯಿತ್ತು. ವಸುಂದರಾ ಅವರು ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆಯುತ್ತಿದ್ದ ಕಾರ್ಯಗಳು ಸರಿಯಾಗಿ ನಡೆಯುತ್ತಿರಲಿಲ್ಲ. ಬಳಿಕ ರಾಜ್ಯ ಕಾರ್ಯವೈಖರಿ ಸಂಸ್ಕೃತಿಯನ್ನೇ ವಸುಂದರಾ ಅವರು ಬದಲಾಯಿಸಿದರು ಎಂದಿದರು.
ಬಳಿಕ 2016 ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ನೆಲೆಗಳ ಮೇಲೆ ಸೇನೆ ನಡೆಸಿದ್ದ ಸರ್ಜಿಕಲ್ ದಾಳಿಯನ್ನು ಟೀಕೆ ಮಾಡಿದ್ದ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮೋದಿ, ಸೇನೆಯ ಸಾಮರ್ಥ್ಯದ ಕುರಿತಂತೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿ. ಹಿಂದೆಂದೂ ಈ ರೀತಿ ನಡೆದಿರಲಿಲ್ಲ. ಇಂತಹ ರಾಜಕೀಯ ಮಾಡುತ್ತಿರುವವರನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದರು.