ನವದೆಹಲಿ: ಮಹಾರಾಷ್ಟ್ರದಲ್ಲಿ ಜನರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಕೇಳಿಕೊಂಡಿದ್ದಾರೆ ಅದನ್ನು ಪಕ್ಷವು ಮಾಡುತ್ತದೆ ಎಂದು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.  


COMMERCIAL BREAK
SCROLL TO CONTINUE READING

ಎನ್‌ಸಿಪಿ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಎನ್‌ಡಿಎ ಘಟಕದ ಶಿವಸೇನೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಸಾಧ್ಯತೆಯ ಬಗ್ಗೆ ಮಾತುಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಈಗ ಪವಾರ್ ಅವರ ಹೇಳಿಕೆ ಬಂದಿದೆ. ಇನ್ನೊಂದೆಡೆಗೆ ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಶಿವಸೇನಾ ಮತ್ತು ಬಿಜೆಪಿ ನಡುವಿನ ಜಗಳವನ್ನು ಅವರು ಬಾಲಿಶ ಎಂದು ಕರೆದಿದ್ದಾರೆ.


ಎನ್‌ಸಿಪಿ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಶಿವಸೇನೆ ಸರ್ಕಾರ ರಚಿಸುವ ಸಾಧ್ಯತೆಯ ಬಗ್ಗೆ ಕೇಳಿದಾಗ, ಈ ವಿಷಯದಲ್ಲಿ ತಮ್ಮ ಪಕ್ಷದಲ್ಲಿ ಯಾವುದೇ ಚರ್ಚೆಗಳಿಲ್ಲ ಎಂದು ಪವಾರ್ ಹೇಳಿದರು."ನಮಗೆ ಸ್ಪಷ್ಟ ಬಹುಮತವಿಲ್ಲ. ಜನರು ನಮ್ಮನ್ನು ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಕೇಳಿಕೊಂಡಿದ್ದಾರೆ. ನಾವು ಆ ಆದೇಶವನ್ನು ಸ್ವೀಕರಿಸುತ್ತೇವೆ ಮತ್ತು ನಾವು ಆ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ನೋಡಿಕೊಳ್ಳುತ್ತೇವೆ'ಎಂದು ಅವರು ಹೇಳಿದರು.


ಅಕ್ಟೋಬರ್ 21 ರರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ ಬಿಜೆಪಿ ಮತ್ತು ಶಿವಸೇನೆ ಕ್ರಮವಾಗಿ 105 ಮತ್ತು 56 ಸ್ಥಾನಗಳನ್ನು ಗೆದ್ದವು. ಎನ್‌ಸಿಪಿ ಮತ್ತು ಕಾಂಗ್ರೆಸ್ ಕ್ರಮವಾಗಿ 54 ಮತ್ತು 44 ಸ್ಥಾನಗಳನ್ನು ಗಳಿಸಿದ್ದವು. ಈಗ ಮಹಾರಾಷ್ಟ್ರದಲ್ಲಿಸರ್ಕಾರ ರಚಿಸಲು ಬಯಸುವ ಯಾವುದೇ ಪಕ್ಷ ಅಥವಾ ಮೈತ್ರಿಕೂಟಕ್ಕೆ 288 ಸದಸ್ಯರ ರಾಜ್ಯ ವಿಧಾನಸಭೆಯಲ್ಲಿ ಕನಿಷ್ಠ 145 ಶಾಸಕರ ಬೆಂಬಲ ಬೇಕಾಗುತ್ತದೆ.