ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಏರಿಕೆ ಕಂಡು ಬರುತ್ತಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಸೋಮವಾರದಂದು ಪರಿಷ್ಕರಿಸಲಾದ ತೈಲ ದರದಲ್ಲಿ ಪೆಟ್ರೋಲ್ ದರ ಏರಿಕೆ ಕಂಡಿದ್ದು, ಡೀಸೆಲ್ ಬೆಲೆ ಸ್ಥಿರತೆ ಕಂಡಿದೆ.


COMMERCIAL BREAK
SCROLL TO CONTINUE READING

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 73.21 ರೂ., ದೆಹಲಿಯಲ್ಲಿ ಡೀಸೆಲ್ ಬೆಲೆ 64.24ರೂ. ಇದೆ.


ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.


ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ


ನಗರಗಳು

ಪೆಟ್ರೋಲ್


(ರೂ./ಲೀ)

ಡೀಸೆಲ್


(ರೂ./ಲೀ)

ದೆಹಲಿ 72.21 64.24
ಕೊಲ್ಕತ್ತಾ 75.55 66.31
ಮುಂಬೈ 78.82 69.43
ಚೆನ್ನೈ 76.03 69.96
ಬೆಂಗಳೂರು 75.63 68.43
ಹೈದರಾಬಾದ್ 77.75 72.14
ತಿರುವನಂತಪುರಂ 76.48 71.17

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 


https://www.iocl.com/TotalProductList.aspx