ನವದೆಹಲಿ: ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ದೇಶಾದ್ಯಂತ ತೈಲ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಪೆಟ್ರೋಲ್ ಬೆಲೆ 18 ಪೈಸೆ ಮತ್ತು ಡೀಸೆಲ್ ಬೆಲೆ 15 ಪೈಸೆ ಹೆಚ್ಚಳವಾಗಿದೆ. ಈ ಬೆಲೆಗಳು ಮಾರ್ಚ್ 29, 2018ರ ಬೆಳಿಗ್ಗೆ 6:00 ಗಂಟೆಯಿಂದ ಅನ್ವಯಿಸುತ್ತದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 73.08 | 63.92 |
ಕೋಲ್ಕತ್ತಾ | 75.80 | 66.61 |
ಮುಂಬೈ | 80.94 | 68.07 |
ಚೆನ್ನೈ | 75.80 | 67.41 |
ಬೆಂಗಳೂರು | 74.23 | 65.00 |
ಹೈದರಾಬಾದ್ | 77.39 | 69.45 |
ತಿರುವನಂತಪುರಂ | 77.00 | 69.38 |