ನವದೆಹಲಿ: ದೇಶಾದ್ಯಂತ ಶನಿವಾರದ ಪೆಟ್ರೋಲ್ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 7 ಪೈಸೆಗಳಷ್ಟು ಇಳಿಕೆ ಕಂಡಿದ್ದು, ಡೀಸೆಲ್ ಬೆಲೆ ಸ್ಥಿರವಾಗಿದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಈ ಪರಿಷ್ಕೃತ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಈ ಕೆಳಕಂಡಂತಿದೆ
ನಗರಗಳು |
ಪೆಟ್ರೋಲ್ (ರೂ./ಲೀ) |
ಡೀಸೆಲ್ (ರೂ./ಲೀ) |
ದೆಹಲಿ | 72.62 | 66.00 |
ಕೊಲ್ಕತ್ತಾ | 75.30 | 68.19 |
ಮುಂಬೈ | 78.27 | 69.17 |
ಚೆನ್ನೈ | 75.44 | 69.71 |
ಬೆಂಗಳೂರು | 75.06 | 68.18 |
ಹೈದರಾಬಾದ್ | 77.16 | 71.88 |
ತಿರುವನಂತಪುರಂ | 75.71 | 70.73 |