ತಿರುವನಂತಪುರಂ : ಎನ್‌ಐಎ ದಾಳಿ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾ (ಪಿಎಫ್‌ಐ) ನಡೆಸುತ್ತಿರುವ ಹರತಾಳ ಹಿಂಸಾಚಾರಕ್ಕೆ ತಿರುಗಿದ್ದು, ಕಣ್ಣೂರಿನಲ್ಲಿ ಉದ್ರಿಕ್ತರು ವಾಹನಗಳ ಮೇಲೆ ಪೆಟ್ರೋಲ್‌ ಬಾಂಬ್‌ ಎಸೆದಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 


COMMERCIAL BREAK
SCROLL TO CONTINUE READING

ಕೇರಳದ ತಲಶ್ಶೇರಿಯಿಂದ ಇರ್ತಿಗೆ ತೆರಳುತ್ತಿದ್ದ ಬಸ್, ವಲಪಟ್ಟಣಂ ಸೇತುವೆ ಬಳಿ ಮೂಕಾಂಬಿಕಾಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಯನಾಡ್‌ನ ಪೀಚನಕೋಟ್ ಬಳಿ ಹರತಾಳ ಬೆಂಬಲಿಗರು ಕಾರು, ಟ್ರಕ್‌ಗಳ ಮೇಲೆ ಕಲ್ಲು ತೂರಾಡಿದ್ದಾರೆ.  ಕೋಝಿಕ್ಕೋಡ್ ಮತ್ತು ಕಣ್ಣೂರಿನಲ್ಲಿ ಪಿಎಫ್‌ಐ ಕಾರ್ಯಕರ್ತರು ನಡೆಸಿದ ಕಲ್ಲು ತೂರಾಟದಲ್ಲಿ ಕ್ರಮವಾಗಿ 15 ವರ್ಷದ ಬಾಲಕಿ ಮತ್ತು ಆಟೋ ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಶ್ರೀಸಾಮಾನ್ಯನಿಗೆ ಬಿಗ್ ಶಾಕ್ : ಅಕ್ಕಿ ಬೆಲೆ ಹೆಚ್ಚಿಸಲಿದೆ ಕೇಂದ್ರ ಸರ್ಕಾರ


ವಾಹನಗಳ ಗಾಜುಗಳು ಒಡೆಯಲಾಗಿದ್ದು, ಯಾರಿಗೂ ಗಾಯಗಳಾಗಿಲ್ಲ. ಪೋತನಕೋಟ್ ಮಂಜ ಮಾಳದಲ್ಲಿ ಪಿಎಫ್‌ಐ ಕಾರ್ಯಕರ್ತರು ಅಂಗಡಿಗೆ ನುಗ್ಗಿ ಹಣ್ಣುಹಂಪಲು ಎಸೆದಿದ್ದಾರೆ. 15 ಜನರ ತಂಡ ಹಿಂಸಾಚಾರ ನಡೆಸಿದ್ದು, ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಇನ್ನೂ ಪಂದಳಂನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಬಸ್ಸಿನ ಮುಂಭಾಗದ ಗಾಜು ಒಡೆಯಲಾಗಿದೆ. 


ಕೇರಳದಲ್ಲಿ ಹರತಾಳಕ್ಕೆ ನಿಷೇಧ ಹೇರಲಾಗಿದ್ದು, ಪ್ರತಿಭಟನೆ ಹೆಸರಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡುವುದು ಸ್ವೀಕಾರಾರ್ಹವಲ್ಲ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ, ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. 


 ರಾಷ್ಟ್ರೀಯ ತನಿಖಾ ಸಂಸ್ಥೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ (ಸೆ. 22) ಕೇರಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ದಾಳಿ ನಡೆಸಿ ಅದರ ನಾಯಕರನ್ನು ಬಂಧಿಸಿದ್ದರು. ಇದನ್ನು ಖಂಡಿಸಿ ಶುಕ್ರವಾರ ಕರೆ ನೀಡಿದ್ದ ಬಂದ್ ಹಿಂಸಾಚಾರಕ್ಕೆ ತಿರುಗಿದೆ. ರಾಜ್ಯಾದ್ಯಂತ ಹಲವಾರು ವಿಧ್ವಂಸಕ ಮತ್ತು ಹಿಂಸಾಚಾರದ ಘಟನೆಗಳು ವರದಿಯಾಗಿವೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.