Rajasthan Political Crisis: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತಳೆದ ನಿಲುವಿನಿಂದ ಆಘಾತಕ್ಕೆ ಒಳಗಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ಅಜಯ್ ಮಾಕನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಶೋಕ್ ಗೆಹ್ಲೋಟ್ ಹೀಗೆ ಮಾಡಲು ಹೇಗೆ ಸಾಧ್ಯ, ಇದನ್ನು ಗೆಹ್ಲೋಟ್ ಅವರಿಂದ ನಾನು ನಿರೀಕ್ಷಿಸಿರಲಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಶಾಸಕಾಂಗ ಪಕ್ಷದ ಸಭೆ ಕರೆಯುವ ಮೊದಲು ದೆಹಲಿಯ ನಾಯಕರು ಅಶೋಕ್ ಗೆಹ್ಲೋಟ್ ಅವರೊಂದಿಗೆ ಹಲವು ಬಾರಿ ಮಾತನಾಡಿದ್ದರು ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ನಾಯಕನನ್ನು ಆಯ್ಕೆ ಮಾಡಲು ಸೋನಿಯಾ ಗಾಂಧಿಗೆ ಅಧಿಕಾರ ನೀಡುವ ಪ್ರಸ್ತಾಪಕ್ಕೆ ಅಶೋಕ್ ಗೆಹ್ಲೋಟ್ ಸಿದ್ಧರಾಗಿದ್ದರು, ಆದರೆ ಶಾಸಕರ ಬಂಡಾಯದ ನಂತರ, ಶಾಸಕರು ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಗೆಹ್ಲೋಟ್ ಹೇಳಿದ್ದಾರೆ. ಇಂದು ಮಧ್ಯಾಹ್ನ ಅಶೋಕ್ ಗೆಹ್ಲೋಟ್ ಕೂಡ ಮಲ್ಲಿಕಾರ್ಜುನ ಖರ್ಗೆ ಅವರ ಮುಂದೆ ವಿಷಾದ ವ್ಯಕ್ತಪಡಿಸಿದ್ದರು. ನಾಳೆ ಸಂಜೆ ನಡೆಯಲಿರುವ ಶಾಸಕಾಂಗ ಪಕ್ಷದ ಅಧಿಕೃತ ಸಭೆಗೆ ಪರ್ಯಾಯವಾಗಿ ಸಭೆ ಕರೆದಿರುವ ಕೆಲ ಸಚಿವರಿಗೆ ನೋಟಿಸ್ ಜಾರಿ ಮಾಡಲಾಗುವುದು ಎನ್ನಲಾಗಿದೆ.

ಶಾಸಕಾಂಗ ಪಕ್ಷದ ಸಭೆ ರದ್ದು
ಇದಕ್ಕೂ ಮುನ್ನ ನಿನ್ನೆ ಜೈಪುರದ ಮುಖ್ಯಮಂತ್ರಿ ನಿವಾಸದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿತ್ತು. ಈ ಸಭೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ಅವರನ್ನು ವೀಕ್ಷಕರು ಮತ್ತು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿತ್ತು.  ಈ ಸಭೆಗೂ ಮುನ್ನ ಗೆಹ್ಲೋಟ್‌ಗೆ ಆಪ್ತರಾಗಿರುವ ಸಚಿವ ಶಾಂತಿ ಧರಿವಾಲ್ ಅವರ ಮನೆಯಲ್ಲಿ ಗೆಹ್ಲೋಟ್ ಪರ ಶಾಸಕರ ಸಭೆ ನಡೆಸಲಾಗಿದೆ. ಈ ಘಟನೆಯ ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ರದ್ದುಗೊಳಿಸಲಾಗಿದೆ.


ಇದನ್ನೂ ಓದಿ-PM Modi Japan Visit: ಜಪಾನ್ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ


ಲಿಖಿತ ವಿಸ್ತೃತ ವರದಿ ಕೇಳಿದ ಸೋನಿಯಾ
ಪ್ರಸ್ತುತ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಅಜಯ್ ಮಾಕನ್ ದೆಹಲಿಗೆ ವಾಪಸ್ಸಾಗಿದ್ದು, ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ನಡೆದ ಘಟನಾವಳಿಗಳ ಕುರಿತು ಮಾಹಿತಿಯನ್ನು ನೀಡಿದ್ದಾರೆ. ಸೋನಿಯಾ ಭೇಟಿಯ ಬಳಿಕ ಮಾತನಾಡಿದ್ದ ಅಜಯ್ ಮಾಕನ್, ಪಕ್ಷದ ಅಧ್ಯಕ್ಷೆ ಲಿಖಿತ ವರದಿಯನ್ನು ಕೇಳಿದ್ದಾರೆ ಎಂದಿದ್ದಾರೆ. ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ನಾವು ಅವರಿಗೆ ವರದಿಯನ್ನು ಸಲ್ಲಿಸುತ್ತೇವೆ ಎಂದು ಅವರು ಹೇಳಿದ್ದಾರೆ. 


ಇದನ್ನೂ ಓದಿ-Congress President Election: ಗೆಹಲೋಟ್ ಬಣದ ಎಲ್ಲಾ ಬೇಡಿಕೆಗಳು ತಿರಸ್ಕೃತ, ಪರಿವೀಕ್ಷಕರಿಗೆ ಲಿಖಿತ ವರದಿ ಸಲ್ಲಿಸಲು ಹೇಳಿದ ಸೋನಿಯಾ


ಅಧ್ಯಕ್ಷ ಚುನಾವಣೆಯ ರೇಸ್ ನಿಂದ ಗೆಹಲೋಟ್ ಹೊರಗೆ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಗಾಗಿ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ ಅಂದರೆ ಸೆಪ್ಟೆಂಬರ್ 30ರವರೆಗೆ ಯಥಾಸ್ಥಿತಿ ಮುಂದುವರೆಯಲಿದೆ. ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ. ಮೂಲಗಳ ಪ್ರಕಾರ. ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಗೆಹಲೋಟ್ ನಾಮಪತ್ರ ಸಲ್ಲಿಸುವ ಸಾಧ್ಯತೆ ತೀರಾ ವಿರಳವಾಗಿದೆ ಎನ್ನಲಾಗುತ್ತಿದೆ. ಸೆಪ್ಟೆಂಬರ್ 30ರ ಬಳಿಕ ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಪಕ್ಷ ಅಶೋಕ್ ಗೆಹಲೋಟ್ ಅವರನ್ನು ಮುಂದಿಟ್ಟುಕೊಂಡು ಮುಂದಿನ ಚುನಾವಣೆಗೆ ಸ್ಪರ್ಧಿಸಲು ಬಯಸುತ್ತಿಲ್ಲ. ಅಶೋಕ್ ಗೆಹ್ಲೋಟ್ ಪಕ್ಷದ ಅಧ್ಯಕ್ಷರಾಗುವ ಸಾಧ್ಯತೆಯಿಂದಾಗಿ ಅವರ ಪರವಾಗಿ ಈ ಬಂಡಾಯ ನಡೆದಿದೆ ಎಂದು ಕಾಂಗ್ರೆಸ್ ಮೂಲಗಳು ಭಾವಿಸಿವೆ.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.