ರೈತರಿಗೆ ಗುಡ್ ನ್ಯೂಸ್..! ಹೊಸ ವರ್ಷಕ್ಕೆ ನಿಮ್ಮ ಖಾತೆಗೆ ಬೀಳಲಿದೆ 2000 ರೂ. ಹಣ
PM kisan samman nidhi 19th : ಹೊಸ ವರ್ಷ 2025 ಪ್ರಾರಂಭಕ್ಕೆ ಕೇವಲ 3 ದಿನಗಳು ಬಾಕಿ ಇವೆ.. ಇದೇ ವೇಳೆ ರೈತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು 19ನೇ ಕಂತು ಬಿಡುಗಡೆ ಮಾಡಲು ಸಜ್ಜಾಗಿದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
PM kisan 19th Installment : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದು. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡಲು ಈ ಯೋಜನೆಯನ್ನು ಪರಿಚಯಿಸಲಾಯಿತು.. ಈ ಯೋಜನೆಯ ಮೂಲಕ ಕೇಂದ್ರ ಸರಕಾರ ಪ್ರತಿ ವರ್ಷ ಅರ್ಹ ರೈತರಿಗೆ 6 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತದೆ..
ಹೌದು.. ರೈತರಿಗೆ ವರ್ಷದಲ್ಲಿ ಮೂರು ಬಾರಿ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರಿ ಈ ಯೋಜನೆಯನ್ನು ಪ್ರಾರಂಭಿಸಿತು. ಅದರಂತೆ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ 2 ಸಾವಿರ ರೂ. ಜಮೆ ಮಾಡುತ್ತದೆ. ಬಡ ರೈತರಿಗೆ ಆರ್ಥಿಕ ನೆರವು ನೀಡಲು ಪ್ರಧಾನ ಮಂತ್ರಿ ಪಿಎಂ ಕಿಸಾನ್ ಯೋಜನೆ ಜಾರಿಗೆ ತರಲಾಯಿತು.. ಇದಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು.
ಇದನ್ನೂ ಓದಿ:Arecanut Price in Karnataka: ಕರ್ನಾಟಕದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಹೇಗಿದೆ..?
ಈ ಯೋಜನೆಯ ಮೂಲಕ ಕೇಂದ್ರವು ರೈತರಿಗೆ ವರ್ಷಕ್ಕೆ 6 ಸಾವಿರ ರೂ. ಈ ಹಣವನ್ನು ವರ್ಷದಲ್ಲಿ ಮೂರು ಕಂತುಗಳಲ್ಲಿ ನೇರವಾಗಿ ರೈತರ ಖಾತೆಗೆ ಜಮಾ ಮಾಡುತ್ತದೆ. ಈ ಯೋಜನೆಯ 18ನೇ ಕಂತಿನ ಹಣ 5 ಅಕ್ಟೋಬರ್ 2024 ರಂದು ಬಿಡುಗಡೆಯಾಗಿತ್ತು..
ಇದೀಗ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 19ನೇ ಕಂತಿಗಾಗಿ ರೈತರು ಕಾಯುತ್ತಿದ್ದಾರೆ. ಫೆಬ್ರವರಿ ಮೊದಲ ವಾರದಲ್ಲಿ 19ನೇ ಅವಧಿಯ ಹಣ ಬರುವ ಸಾಧ್ಯತೆ ಇದೆ. ಹೊಸ ವರ್ಷದ ಪ್ರಾರಂಭದಲ್ಲೇ ಕೇಂದ್ರ ರೈತರ ಖಾತೆಗೆ ಹಣ ಜಮೆ ಮಾಡಲಿದೆ..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.