ನೂತನ ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ, ಅಮಿತ್ ಶಾ ಅಭಿನಂದನೆ: ಬಿಎಸ್ವೈ ಬಗ್ಗೆ ಹೊಗಳಿಕೆ...
ಬಿಜೆಪಿಗೆ ಬಿ.ಎಸ್.ಯಡಿಯೂರಪ್ಪನವರು ನೀಡಿರುವ ಕೊಡುಗೆಯನ್ನು ಪದಗಳಲ್ಲಿ ವರ್ಣಿಸಲಾಗುವುದಿಲ್ಲ.
ನವದೆಹಲಿ: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಎಸ್.ಬೊಮ್ಮಾಯಿಯವರಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದಾರೆ. ‘ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಸವರಾಜ್ ಬೊಮ್ಮಾಯಿಯವರಿಗೆ ಅಭಿನಂದನೆಗಳು’ ಎಂದು ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಇಬ್ಬರು ನಾಯಕರು ಕೂಡ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಹಾಡಿ ಹೊಗಳಿದ್ದಾರೆ.
‘ಬಸವರಾಜ್ ಬೊಮ್ಮಾಯಿಯವರು ಉತ್ತಮ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ರಾಜ್ಯದಲ್ಲಿ ಅವರು ಅತ್ಯುತ್ತಮ ಕಾರ್ಯಗಳನ್ನು ನಿರ್ವಹಿಸುತ್ತಾರೆಂಬ ವಿಶ್ವಾಸ ನನಗಿದೆ. ಫಲಪ್ರದ ಅಧಿಕಾರಾವಧಿಗೆ ಶುಭಾಶಯಗಳು’ ಅಂತಾ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ‘ಬಿಜೆಪಿಗೆ ಬಿ.ಎಸ್.ಯಡಿಯೂರಪ್ಪನವರು ನೀಡಿರುವ ಕೊಡುಗೆಯನ್ನು ಪದಗಳಲ್ಲಿ ವರ್ಣಿಸಲಾಗುವುದಿಲ್ಲ. ಕರ್ನಾಟಕದಲ್ಲಿ ಪಕ್ಷದ ಬೆಳವಣಿಗೆಗೆ ಅವರು ಸಾಕಷ್ಟು ಶ್ರಮಿಸಿದ್ದಾರೆ. ದಶಕಗಳ ಕಾಲ ಕಷ್ಟಪಟ್ಟು ದುಡಿದು ಪಕ್ಷ ಕಟ್ಟಿದ್ದಾರೆ. ಕರ್ನಾಟಕದ ಎಲ್ಲ ಭಾಗಗಳಲ್ಲಿ ಸಂಚರಿಸಿ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಸಾಮಾಜಿಕ ಕಲ್ಯಾಣಕ್ಕಾಗಿ ಅವರ ಬದ್ಧತೆ, ನಿಷ್ಠೆ ನಿಜಕ್ಕೂ ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಿಎಸ್ವೈ ಬಗ್ಗೆ ಅನುಕಂಪವಿದೆ, ರಾಜೀನಾಮೆಯ ಕಾರಣ ಬಹಿರಂಗಪಡಿಸಲಿ: ಸಿದ್ದರಾಮಯ್ಯ
ಅಮಿತ್ ಶಾ ಟ್ವೀಟ್ ಮಾಡಿ, ‘ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿಯವರಿಗೆ ಶುಭಾಶಯಗಳು. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಅವರು ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆಂಬ ನಂಬಿಕೆ ಇದೆ. ತಮ್ಮ ಬುದ್ಧಿವಂತಿಕೆ ಮತ್ತು ಅನುಭವದಿಂದ ರಾಜ್ಯದ ಬಡವರು ಮತ್ತು ರೈತರಿಗಾಗಿ ಸೇವೆ ಸಲ್ಲಿಸುವ ಬಿಜೆಪಿಯ ಸಂಕಲ್ಪವನ್ನು ಮತ್ತಷ್ಟು ಹೆಚ್ಚಿಸಲಿದ್ದಾರೆ’ ಎಂದಿದ್ದಾರೆ.
ವಲಸಿಗ ಸಚಿವರು ವಾಪಸ್ ಬಂದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ
ಡಿಸಿಎಂ ಸ್ಥಾನದ ಬಗ್ಗೆ ಪಕ್ಷ ನಿರ್ಧರಿಸುತ್ತದೆ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ