Narendra Modi : ಇಂಡಿಯಾ ಗೇಟ್‌ನಲ್ಲಿ ಸ್ಥಾಪನೆಯಾಗಲಿದೆ `ಸುಭಾಷ್ ಚಂದ್ರ ಬೋಸ್ ಪ್ರತಿಮೆ`..!
ಗ್ರಾನೈಟ್‌ನಿಂದ ಮಾಡಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ನವದೆಹಲಿ : ರಾಷ್ಟ್ರ ರಾಜಧಾನಿಯ ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್(Subhas Chandra Bose) ಅವರ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಗ್ರಾನೈಟ್‌ನಿಂದ ಮಾಡಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ
ತಮ್ಮ ಅಧಿಕೃತ ಟ್ವಿಟ್ಟರ್ ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ(Narendra Modi), “ಇಡೀ ರಾಷ್ಟ್ರವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವನ್ನು ಆಚರಿಸುತ್ತಿರುವ ಸಮಯದಲ್ಲಿ, ಅವರ ಭವ್ಯವಾದ ಗ್ರಾನೈಟ್ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಇದು ಅವರಿಗೆ ಭಾರತದ ಋಣಿಯ ಪ್ರತೀಕವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.
LIC ಈ ಯೋಜನೆಗೆ ಬರೀ 1 ಪ್ರೀಮಿಯಂ ಪಾವತಿಸಿ ನಂತರ ಪ್ರತಿ ತಿಂಗಳು ಪಡೆಯಿರಿ ₹12,000!
ನೇತಾಜಿಯವರ ಹೊಲೊಗ್ರಾಮ್ ಪ್ರತಿಮೆಯನ್ನು ಮೊದಲ ಭಾರಿಗೆ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ, 'ನೇತಾಜಿ ಬೋಸ್ ಅವರ ಬೃಹತ್ ಪ್ರತಿಮೆ ಸಿದ್ಧವಾಗದಿರುವವರೆಗೆ, ಆ ಸ್ಥಳದಲ್ಲಿ ಹೊಲೊಗ್ರಾಮ್ ಪ್ರತಿಮೆಯನ್ನು ಸ್ಥಾಪಿಸಲಾಗುವುದು. ನೇತಾಜಿಯವರ ಜನ್ಮದಿನವಾದ ಜನವರಿ 23 ರಂದು ನಾನು ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸುತ್ತೇನೆ ಎಂದು ತಿಳಿಸಿದ್ದಾರೆ.
ಅಮರ್ ಜವಾನ್ ಜ್ಯೋತಿ ರಾಷ್ಟ್ರೀಯ ಯುದ್ಧ ಸ್ಮಾರಕದ ಜ್ಯೋತಿಯಲ್ಲಿ ವಿಲೀನ
ಇಂಡಿಯಾ ಗೇಟ್‌ನಲ್ಲಿ ಕಳೆದ 50 ವರ್ಷಗಳಿಂದ ಉರಿಯುತ್ತಿರುವ ಅಮರ್ ಜವಾನ್ ಜ್ಯೋತಿಯನ್ನು ಇಂದು (ಶುಕ್ರವಾರ) ರಾಷ್ಟ್ರೀಯ ಯುದ್ಧ ಸ್ಮಾರಕ(National War Memorial)ದಲ್ಲಿ ಉರಿಯುತ್ತಿರುವ ಜ್ವಾಲೆಯೊಂದಿಗೆ ವಿಲೀನಗೊಳಿಸಲಾಗುತ್ತಿದೆ. ಇದರರ್ಥ ಇಂಡಿಯಾ ಗೇಟ್‌ನಲ್ಲಿ ನಿರ್ಮಿಸಲಾದ ಅಮರ್ ಜವಾನ್ ಜ್ಯೋತಿಯ ಸದಾ ಉರಿಯುವ ಜ್ಯೋತಿಯು ಈಗ 50 ವರ್ಷಗಳ ನಂತರ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯೊಂದಿಗೆ ಶಾಶ್ವತವಾಗಿ ವಿಲೀನಗೊಳ್ಳಲಿದೆ.
Camel Viral Video: ತನಗೆ ತೊಂದರೆ ಕೊಡಲು ಬಂದವನಿಗೆ ತಕ್ಕ ಪಾಠ ಕಲಿಸಿದ ಒಂಟೆ ವಿಡಿಯೋ ವೈರಲ್
ಇಂಡಿಯಾ ಗೇಟ್(India Gate)ನಿಂದ ಕೇವಲ 400 ಮೀಟರ್ ದೂರದಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಶುಕ್ರವಾರ ಮಧ್ಯಾಹ್ನ ಅಮರ್ ಜವಾನ್ ಜ್ಯೋತಿಯನ್ನು ಉರಿಯುವ ಜ್ವಾಲೆಯೊಂದಿಗೆ ವಿಲೀನಗೊಳಿಸಲಾಗುವುದು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
25 ಫೆಬ್ರವರಿ 2019 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಉದ್ಘಾಟಿಸಿದರು, ಅಲ್ಲಿ 25,942 ಸೈನಿಕರ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಬರೆಯಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.