ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ ನ  ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಝಾಯೆದ್ ಮೆಡಲ್ ನೀಡಿ ಗುರುವಾರ ಗೌರವಿಸಲಾಯಿತು.


COMMERCIAL BREAK
SCROLL TO CONTINUE READING

ಭಾರತ ಮತ್ತು ಯುಎಇ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಮೋದಿ ಪ್ರಮುಖ ಪಾತ್ರ ವಹಿಸಿದ್ದರ ಗೌರವಾರ್ಥವಾಗಿ ದೇಶದ ಅತ್ಯುನ್ನತ ಪ್ರಶಸ್ತಿ ನೀಡಿರುವುದಾಗಿ ಯುಎಇ ಸರ್ಕಾರ ತಿಳಿಸಿದೆ. 


ಈ ಬಗ್ಗೆ ಟ್ವೀಟ್ ಮಾಡಿರುವ ಅಬುದಾಬಿ ದೊರೆ ಮೊಹಮ್ಮದ್ ಬಿನ್ ಝಯೆದ್, "ನಾವು ಭಾರತದೊಂದಿಗೆ ಐತಿಹಾಸಿಕ ಮತ್ತು ಸಮಗ್ರವಾದ ಕಾರ್ಯತಂತ್ರದ ಸಂಬಂಧಗಳನ್ನು ಹೊಂದಿದ್ದೇವೆ. ನಮ್ಮ ಆತ್ಮೀಯ ಗೆಳೆಯರಾದ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ನಡುವಿನ ಸಂಬಂಧಗಳನ್ನು ವೃದ್ಧಿಸುವಲ್ಲಿ ಗಮನಾರ್ಹ ಪಾತ್ರ ವಹಿಸಿದ್ದಾರೆ. ಅವರ ಈ ಪ್ರಯತ್ನವನ್ನು ಶ್ಲಾಘಿಸಿ ಯುಎಇ ಅಧ್ಯಕ್ಷರು ಝಾಯೆದ್ ಮೆಡಲ್ ನೀಡಿ ಗೌರವಿಸುತ್ತಿದ್ದಾರೆ" ಎಂದಿದ್ದಾರೆ. 


ಈ ಹಿಂದೆ ಝಾಯೆದ್ ಮೆಡಲ್ ಅನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್, ಅಮೇರಿಕಾ ಮಾಜಿ ಅಧ್ಯಕ್ಷ ಜಾರ್ಜ್ ಡಬ್ಯೂ ಬುಷ್, ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೊಲಸ್ ಸರ್ಕೋಜಿ, ಜರಮಣಿಯ ಚಾನ್ಸಲರ್ ಏಂಜೆಲಾ ಮಾರ್ಕೆಲ್, ಇಂಗ್ಲೆಂಡ್ ನ ಕ್ವೀನ್ ಎಲಿಜೆಬೆತ್ II ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರಿಗೆ ನೀಡಲಾಗಿದೆ.