One Nation One Election: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಚುನಾವಣೆಯನ್ನು ಒಂದೇ ವೇಳೆಗೆ ನಡೆಸುವ ಗುರಿ ಹೊಂದಿರುವ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಬುಧವಾರ ಕೇಂದ್ರ ಸಚಿವ ಸಂಪುಟದ ಮುಂದೆ ಇಡಲಾಗಿತ್ತು.


COMMERCIAL BREAK
SCROLL TO CONTINUE READING

ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ಮಾರ್ಚ್‌ನಲ್ಲಿ ವರದಿ ಸಲ್ಲಿಸಿತ್ತು. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 'ಒಂದು ರಾಷ್ಟ್ರ ಒಂದು ಚುನಾವಣೆ'ಗೆ ಸಂಬಂಧಿಸಿದ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.


ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ 'ಒಂದು ರಾಷ್ಟ್ರ, ಒಂದು ಚುನಾವಣೆ' ಸಮಿತಿಯು ಪ್ರಸಕ್ತ ವರ್ಷದ ಮಾರ್ಚ್ 15ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ಸಲ್ಲಿಸಿದ್ದು, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಿತ್ತು. ಸಮಿತಿಯು ಶಿಫಾರಸುಗಳ ಅನುಷ್ಠಾನವನ್ನು ಪರಿಶೀಲಿಸಲು 'ಇಂಪ್ಲಿಮೆಂಟೇಶನ್ ಗ್ರೂಪ್' ಅನ್ನು ಸ್ಥಾಪಿಸಲು ಪ್ರಸ್ತಾಪಿಸಿದೆ.


ಇದನ್ನೂ ಓದಿ: ನಮ್ಮ ಮಹಿಳೆಯರಿಗೆ ಎಷ್ಟರ ಮಟ್ಟಿಗೆ ಅರಿವಿದೆ ಎನ್ನುವುದನ್ನು ಸಮೀಕ್ಷೆ ಮಾಡಬೇಕೆಂದುಕೊಂಡಿದ್ದೇವೆ


ಸಮಯ ಮತ್ತು ಹಣ ಉಳಿತಾಯ!


ಏಕಕಾಲಿಕ ಚುನಾವಣೆಗಳು ಸಮಯ ಮತ್ತು ಹಣ ಉಳಿಸಲು ಸಹಾಯ ಮಾಡುತ್ತದೆ. ಅಭಿವೃದ್ಧಿ ಮತ್ತು ಸಾಮಾಜಿಕ ಒಗ್ಗಟ್ಟನ್ನು ಉತ್ತೇಜಿಸುತ್ತದೆ, "ಪ್ರಜಾಪ್ರಭುತ್ವದ ಅಡಿಪಾಯ"ವನ್ನು ಆಳಗೊಳಿಸುತ್ತದೆ, ಇದು ʼಭಾರತʼದ ಆಶಯಗಳನ್ನು ಸಾಕಾರಗೊಳಿಸಲು ಸಹಾಯ ಮಾಡುತ್ತದೆ ಎಂದು ಸಮಿತಿ ಹೇಳಿದೆ. ರಾಜ್ಯ ಚುನಾವಣಾ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಚುನಾವಣಾ ಆಯೋಗವು ಸಾಮಾನ್ಯ ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಗಳನ್ನು ಸಿದ್ಧಪಡಿಸುವಂತೆ ಸಮಿತಿಯು ಶಿಫಾರಸು ಮಾಡಿದೆ. ಪ್ರಸ್ತುತ ಇಸಿಐ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಜವಾಬ್ದಾರರಾಗಿದ್ದರೆ, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ರಾಜ್ಯ ಚುನಾವಣಾ ಆಯೋಗಗಳು ನಿರ್ವಹಿಸುತ್ತವೆ.


ಸಮಿತಿಯು 18 ಸಾಂವಿಧಾನಿಕ ತಿದ್ದುಪಡಿಗಳನ್ನು ಶಿಫಾರಸು ಮಾಡಿದೆ. ಇವುಗಳಲ್ಲಿ ಹೆಚ್ಚಿನವುಗಳಿಗೆ ರಾಜ್ಯ ಅಸೆಂಬ್ಲಿಗಳ ಅನುಮೋದನೆ ಅಗತ್ಯವಿಲ್ಲ. ಆದಾಗ್ಯೂ ಇವುಗಳಿಗೆ ಕೆಲವು ಸಾಂವಿಧಾನಿಕ ತಿದ್ದುಪಡಿ ಮಸೂದೆಗಳು ಬೇಕಾಗುತ್ತವೆ, ಅದನ್ನು ಸಂಸತ್ತು ಅಂಗೀಕರಿಸಬೇಕಾಗಿದೆ. ಕನಿಷ್ಠ ಅರ್ಧದಷ್ಟು ರಾಜ್ಯಗಳು ಏಕ ಮತದಾರರ ಪಟ್ಟಿ ಮತ್ತು ಏಕ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದಂತೆ ಕೆಲವು ಪ್ರಸ್ತಾವಿತ ಬದಲಾವಣೆಗಳನ್ನು ಅನುಮೋದಿಸಬೇಕಾಗಿದೆ.


ಇದನ್ನೂ ಓದಿ: ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ :ಪೇನ್ ಕಿಲ್ಲರ್ ಮಾತ್ರೆಗಳಿಂದ ಈಗ ಆತಂಕ


ಶೀಘ್ರದಲ್ಲೇ ಕಾನೂನು ಆಯೋಗದ ವರದಿ ಬರುವ ಸಾಧ್ಯತೆ!  


ಪ್ರತ್ಯೇಕವಾಗಿ ಕಾನೂನು ಆಯೋಗವು ಏಕಕಾಲಿಕ ಚುನಾವಣೆಗಳ ಬಗ್ಗೆ ತನ್ನದೇ ಆದ ವರದಿಯೊಂದಿಗೆ ಶೀಘ್ರದಲ್ಲೇ ಸಲ್ಲಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಕಾನೂನು ಆಯೋಗವು 2029ರಿಂದ ಸರ್ಕಾರದ ಎಲ್ಲಾ ಮೂರು ಹಂತಗಳಿಗೆ ಅಂದರೆ ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಪುರಸಭೆಗಳು ಮತ್ತು ಪಂಚಾಯತ್‌ಗಳಂತಹ ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಶಿಫಾರಸು ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.