ಇಂದು 30 ಸಚಿವರು ಪ್ರಮಾಣ ವಚನ ಸ್ವೀಕಾರ! ಯಾರಿಗೆ ಯಾವ ಖಾತೆ..?

PM Narendra modi 3.0: ಲೋಕಸಭೆ ಚುನಾವಣೆ ಗೆಲುವಿನ ಬಳಿಕ ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಅಲ್ಲದೆ, 30 ಸಚಿವರೂ ಸಹ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.. 

Written by - Krishna N K | Last Updated : Jun 9, 2024, 01:31 PM IST
    • ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ
    • 30 ಸಚಿವರೂ ಸಹ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ..
    • ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರ (NDA) ರಚನೆ ಮಾಡಲಿದೆ.
ಇಂದು 30 ಸಚಿವರು ಪ್ರಮಾಣ ವಚನ ಸ್ವೀಕಾರ! ಯಾರಿಗೆ ಯಾವ ಖಾತೆ..? title=

PM Modi Swearing live: ಭಾರತದಲ್ಲಿ ಏಪ್ರಿಲ್ 19 ರಂದು ಪ್ರಾರಂಭವಾದ 7 ಹಂತದ ಚುನಾವಣೆಯ ಫಲಿತಾಂಶ ಜೂನ್ 4 ರಂದು ಪ್ರಕಟಿಸಲಾಯಿತು. ಇದರಲ್ಲಿ ಯಾವುದೇ ಪಕ್ಷ ಒಂದೇ ಬಹುಮತ ಸಾಧಿಸಿಲ್ಲ. ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರ (NDA) ರಚನೆ ಮಾಡಲಿದೆ. ಇದಕ್ಕಾಗಿ ಇತ್ತೀಚೆಗೆ ದೆಹಲಿಯಲ್ಲಿ ಸಭೆ ನಡೆದಿದ್ದು, ಮೋದಿ ಮತ್ತೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. 

ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಇತಿಹಾಸದಲ್ಲಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎರಡನೇ ವ್ಯಕ್ತಿಯಾಗಿದ್ದಾರೆ. ಮೋದಿಯವರ ಕ್ಯಾಬಿನೆಟ್‌ನಲ್ಲಿ ಅನೇಕ ಬದಲಾವಣೆಗಳಾಗುವ ನಿರೀಕ್ಷೆಯಿದೆ. ಅದರಂತೆ ಸಚಿವರಿಗೆ ಒಂದಕ್ಕಿಂತ ಹೆಚ್ಚು ಇಲಾಖೆ ಹಂಚಿಕೆ ಮಾಡುವ ಸಾಧ್ಯತೆ ಇಲ್ಲ ಎಂಬ ಮಾಹಿತಿ ಹೊರಬಿದ್ದಿದೆ. 

ಇದನ್ನೂ ಓದಿ:ಪ್ರಮಾಣ ವಚನ ಸ್ವೀಕರಿಸುವ ಮುನ್ನ ಗಾಂಧೀಜಿ ಮತ್ತು ವಾಜಪೇಯಿ ಅವರಿಗೆ ನರೇಂದ್ರ ಮೋದಿ ಪುಷ್ಪ ನಮನ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಮೋದಿ ಜೊತೆಗೆ ಸುಮಾರು 30 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಅದೇ ವೇಳೆಗೆ ಈ ಬಾರಿ ಒಟ್ಟು 78ರಿಂದ 81 ಮಂದಿ ಸಚಿವರಾಗುವ ನಿರೀಕ್ಷೆ ಇದೆ. 

ಗೃಹ, ರಕ್ಷಣೆ, ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳಂತಹ ಪ್ರಮುಖ ಖಾತೆಗಳು ಬಿಜೆಪಿ ಬಳಿ ಇರುತ್ತವೆ, ಆದರೆ ನಾಗರಿಕ ವಿಮಾನಯಾನ, ಕಲ್ಲಿದ್ದಲು ಮತ್ತು ಕೃಷಿಯಂತಹ ಕ್ಷೇತ್ರಗಳನ್ನು ಮೈತ್ರಿಕೂಟಕ್ಕೆ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಇಂದು ಸಂಜೆ 7.15ಕ್ಕೆ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗಲಿದ್ದು, 45 ನಿಮಿಷಗಳ ಕಾಲ ನಡೆಯಲಿದೆ. 

ಇದನ್ನೂ ಓದಿ:ದೇಶದ ವೀರರ ಸ್ಮಾರಕಕ್ಕೆ ಮೋದಿ ಭೇಟಿ. ಬಾಪು, ಅಟಲ್‌ ಜಿ ಸ್ಮಾರಕಕ್ಕೆ ಮೋದಿ ನಮನ.

ಬಿಜೆಪಿ 2014 ರಿಂದ ಭಾರತವನ್ನು ಆಳುತ್ತಿದೆ. ಇಲ್ಲಿಯವರೆಗೆ ಎರಡು ಅವಧಿಗೆ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಒಂದೇ ಬಹುಮತವನ್ನು ಹೊಂದಿತ್ತು. ಆದರೆ ಈ ಬಾರಿ ಸ್ಪಷ್ಟ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಬಿಜೆಪಿಗೆ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಮತ್ತು ನಿತೀಶ್ ಕುಮಾರ್ ಅವರ ಜನತಾ ದಳದ ಬೆಂಬಲ ಬೇಕಿತ್ತು. ಇದನ್ನು ಅರ್ಥ ಮಾಡಿಕೊಂಡಿರುವ ಸಮ್ಮಿಶ್ರ ಪಕ್ಷಗಳು ತಮಗೆ ಬೇಕಾದ ಕ್ಷೇತ್ರಗಳನ್ನು ಕೇಳಿಕೊಂಡು ಒತ್ತಡ ಹೇರುತ್ತಿವೆ. ಹೀಗಾಗಿ ಕಳೆದ ಬಾರಿ ಸಚಿವರಾಗಿದ್ದವರಿಗೆ ಈ ಬಾರಿ ಅವಕಾಶ ಸಿಗುವುದು ಕಷ್ಟವಾಗಿದೆ, ಸಿಕ್ಕರೂ ಒಂದಕ್ಕಿಂತ ಹೆಚ್ಚು ಇಲಾಖೆಗಳು ಸಿಗುವುದಿಲ್ಲ ಎನ್ನಲಾಗುತ್ತಿದೆ. 

ಎನ್‌ಡಿಎ ಮಿತ್ರಪಕ್ಷಗಳು ಮತ್ತು ವಿದೇಶಿ ಅತಿಥಿಗಳು ಇಂದು ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಚಂದ್ರಬಾಬು ಅವರ ತೆಲುಗು ದೇಶಂ ಪಕ್ಷಕ್ಕೆ 4 ಸಚಿವ ಸ್ಥಾನ ಹಾಗೂ ಜೆಡಿಯುಗೆ 2 ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂಬ ವರದಿಗಳಿವೆ. 

ಇದನ್ನೂ ಓದಿ:15 ದಿನಗಳಲ್ಲಿಯೇ ನರೇಂದ್ರ ಮೋದಿ ಸರ್ಕಾರ ಪತನ: ಮಮತಾ ಬ್ಯಾನರ್ಜಿ ಭವಿಷ್ಯ!

ಭಾರತದ ಇತಿಹಾಸದಲ್ಲಿ ಸತತ ಮೂರು ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಮೋದಿ ಪಾತ್ರರಾಗಿದ್ದಾರೆ. ಈ ಹಿಂದೆ, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು 1952, 1957 ಮತ್ತು 1962 ರ ಚುನಾವಣೆಯಲ್ಲಿ ಗೆದ್ದಿದ್ದರು. ಇಂದು ಮೋದಿ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News