PM Modi Social Media Accounts : ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಪ್ರೊಫೈಲ್ ಫೋಟೋವನ್ನು ಬದಲಾಯಿಸಿದ್ದಾರೆ. ಅವರು ತಮ್ಮ ಎಲ್ಲಾ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳ ಪ್ರೊಫೈಲ್ ಫೋಟೋದಲ್ಲಿ ತ್ರಿವರ್ಣ ಧ್ವಜವನ್ನು ಹಾಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಆಗಸ್ಟ್ 2 ವಿಶೇಷ ದಿನ. ನಾವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ತ್ರಿವರ್ಣ ಧ್ವಜವನ್ನು ಗೌರವಿಸುವ ಸಾಮೂಹಿಕ ಅಭಿಯಾನದ ಭಾಗವಾಗಿ ನಮ್ಮ ದೇಶವು 'ಹರ್ ಘರ್ ತಿರಂಗಾ ಕ್ಕೆ ಸಿದ್ಧವಾಗಿದೆ. ನನ್ನ ಸಾಮಾಜಿಕ ಮಾಧ್ಯಮ ಪುಟದಲ್ಲಿ ನಾನು ಡಿಪಿ ಬದಲಾಯಿಸಿದ್ದೇನೆ ಮತ್ತು ಅದೇ ರೀತಿ ಮಾಡುವಂತೆ ನಿಮ್ಮನ್ನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.
It is a special 2nd August today! At a time when we are marking Azadi Ka Amrit Mahotsav, our nation is all set for #HarGharTiranga, a collective movement to celebrate our Tricolour. I have changed the DP on my social media pages and urge you all to do the same. pic.twitter.com/y9ljGmtZMk
— Narendra Modi (@narendramodi) August 2, 2022
ಇದನ್ನೂ ಓದಿ : ಮುಂದಿನ ನಾಲ್ಕೈದು ದಿನ ದೇಶದ ಈ ಭಾಗಗಳಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಐಎಂಡಿ
‘ಆಜಾದಿ ಕಾ ಅಮೃತ್ ಮಹೋತ್ಸವ’ ಸಾಮೂಹಿಕ ಆಂದೋಲನವಾಗಿ ಬದಲಾಗುತ್ತಿದೆ ಮತ್ತು ಆಗಸ್ಟ್ 2 ರಿಂದ ಆಗಸ್ಟ್ 15 ರವರೆಗೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ‘ತ್ರಿವರ್ಣ ಧ್ವಜ’ವನ್ನು ಪ್ರೊಫೈಲ್ ಚಿತ್ರವಾಗಿ ಬಳಸುವಂತೆ ಪ್ರಧಾನಿ ಮೋದಿ ಭಾನುವಾರ ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕರೆ ನೀಡಿದ್ದರು.
ತ್ರಿವರ್ಣ ಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಲಿ ವೆಂಕಯ್ಯ ಅವರ ಜನ್ಮದಿನದಂದು ಪ್ರಧಾನಿ ಮೋದಿ ಅವರಿಗೆ ಶೃದ್ದಾಂಜಲಿ ಸಲ್ಲಿಸಿದ್ದಾರೆ. ನಮಗೆ ತ್ರಿವರ್ಣ ಧ್ವಜವನ್ನು ನೀಡಿರುವ ತಮಗೆ ನಮ್ಮ ದೇಶ ಅವರಿಗೆ ಸದಾ ಋಣಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಮ್ಮ ತ್ರಿವರ್ಣ ಧ್ವಜದ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ. ತ್ರಿವರ್ಣ ಧ್ವಜದಿಂದ ಶಕ್ತಿ ಮತ್ತು ಸ್ಫೂರ್ತಿ ಪಡೆದು, ನಾವು ರಾಷ್ಟ್ರದ ಪ್ರಗತಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸಬೇಕೆಂದು ಬಯಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ : ಆತ್ಮಹತ್ಯೆಗೆ ಶರಣಾದ ಎನ್‌ಟಿಆರ್ ಪುತ್ರಿ ಉಮಾ ಮಹೇಶ್ವರಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.