ಹಥ್ರಾಸ್ ಸಾಮೂಹಿಕ ಅತ್ಯಾಚಾರ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದೇನು?

 ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಮಹಿಳೆಯ ಮೇಲೆ ಮೇಲ್ಜಾತಿಯ ಠಾಕೂರ್ ಸಮುದಾಯಕ್ಕೆ ಸೇರಿದ ನಾಲ್ವರು ವ್ಯಕ್ತಿಗಳು ಎಸೆಗಿದ ಸಾಮೂಹಿಕ ಅತ್ಯಾಚಾರದ ಕೃತ್ಯದ ಬಗ್ಗೆ  ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿದೆ.

Last Updated : Sep 30, 2020, 06:59 PM IST
 ಹಥ್ರಾಸ್ ಸಾಮೂಹಿಕ ಅತ್ಯಾಚಾರ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದೇನು?   title=
file photo

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಮಹಿಳೆಯ ಮೇಲೆ ಮೇಲ್ಜಾತಿಯ ಠಾಕೂರ್ ಸಮುದಾಯಕ್ಕೆ ಸೇರಿದ ನಾಲ್ವರು ವ್ಯಕ್ತಿಗಳು ಎಸೆಗಿದ ಸಾಮೂಹಿಕ ಅತ್ಯಾಚಾರದ ಕೃತ್ಯದ ಬಗ್ಗೆ  ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿದೆ.

ಪೊಲೀಸರು ಮೃತ ಮಹಿಳೆ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಕಳೆದ ರಾತ್ರಿ ಪೊಲೀಸರು ಅವಳನ್ನು ಅಂತ್ಯಸಂಸ್ಕಾರ ಮಾಡಿದ ರೀತಿ ಬಗ್ಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ: ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಾಂಗ್ರೆಸ್

ಈ ಸಂದರ್ಭದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಡಿಯೋ-ಲಿಂಕ್ ಮೂಲಕ ಕುಟುಂಬದೊಂದಿಗೆ ಮಾತನಾಡಿದ್ದಾರೆ.ಈ ಪ್ರಕರಣದ ತನಿಖೆಗಾಗಿ ಮುಖ್ಯಮಂತ್ರಿ ಇಂದು ವಿಶೇಷ ತಂಡವನ್ನು ರಚಿಸಿದ್ದಾರೆ ಮತ್ತು ವಿಚಾರಣೆಗೆ ತ್ವರಿತ ನ್ಯಾಯಾಲಯಕ್ಕೆ ಆದೇಶಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದು, ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆ ವಿಧಿಸುವಂತೆ ಹೇಳಿದ್ದಾರೆ' ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

"ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಹತ್ರಾಸ್ ಘಟನೆ ಕುರಿತು ಮಾತನಾಡಿದ್ದಾರೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ" ಎಂದು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

Trending News