ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ನೇಮಕಾತಿ ಮಾಡಲು ಪ್ರಧಾನಿ ಸೂಚನೆ

ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಟ್ವೀಟ್ ಮಾಡಿದೆ. ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿರುವ ಮಾನವ ಸಂಪನ್ಮೂಲದ ಸ್ಥಾನವನ್ನು ಪರಿಶೀಲಿಸಲಾಗಿದೆ. ಮುಂದಿನ 1.5 ವರ್ಷಗಳಲ್ಲಿ ಸರ್ಕಾರವು 10 ಲಕ್ಷ ಜನರನ್ನು ಮಿಷನ್ ಮೋಡ್‌ ಅಡಿಯಲ್ಲಿ ಉದ್ಯೋಗಕ್ಕೆ ನೇಮಿಸಿಕೊಳ್ಳಬೇಕೆಂದು ನಿರ್ದೇಶಿಸಲಾಗಿದೆ. 

Written by - Bhavishya Shetty | Last Updated : Jun 14, 2022, 10:50 AM IST
  • ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರಿಗೆ ಶುಭ ಸುದ್ದಿ
  • ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ನೇಮಕಾತಿ ಮಾಡಬೇಕು
  • ಪ್ರಧಾನಿ ನರೇಂದ್ರ ಮೋದಿ ಸೂಚನೆ
ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ನೇಮಕಾತಿ ಮಾಡಲು ಪ್ರಧಾನಿ ಸೂಚನೆ  title=
PM Modi

ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಸುದ್ದಿಯೊಂದನ್ನು ನೀಡಿದ್ದಾರೆ. ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಸರ್ಕಾರಿ ನೇಮಕಾತಿಗಳನ್ನು ಮಾಡಬೇಕು ಎಂದು ಪ್ರಧಾನಿ ಮೋದಿ ಇಲಾಖೆಯ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಈ ಕೆಲಸವನ್ನು ಮಿಷನ್ ಮೋಡ್‌ನಲ್ಲಿ ಮಾಡಲಾಗುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಪ್ರಧಾನಿ ಮೋದಿ ಕಚೇರಿ ಮಾಹಿತಿ ನೀಡಿದೆ.

ಇದನ್ನು ಓದಿ: Jack Manju: ನಿರ್ಮಾಪಕ ಜಾಕ್‌ ಮಂಜು ಆಸ್ಪತ್ರೆಗೆ ದಾಖಲು

ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಟ್ವೀಟ್ ಮಾಡಿದೆ. ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿರುವ ಮಾನವ ಸಂಪನ್ಮೂಲದ ಸ್ಥಾನವನ್ನು ಪರಿಶೀಲಿಸಲಾಗಿದೆ. ಮುಂದಿನ 1.5 ವರ್ಷಗಳಲ್ಲಿ ಸರ್ಕಾರವು 10 ಲಕ್ಷ ಜನರನ್ನು ಮಿಷನ್ ಮೋಡ್‌ ಅಡಿಯಲ್ಲಿ ಉದ್ಯೋಗಕ್ಕೆ ನೇಮಿಸಿಕೊಳ್ಳಬೇಕೆಂದು ನಿರ್ದೇಶಿಸಲಾಗಿದೆ. 

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರದ ಅವಧಿಯಲ್ಲಿ ದೇಶದಲ್ಲಿ ನಿರುದ್ಯೋಗ ಹೆಚ್ಚಿದೆ ಎಂದು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಪ್ರತಿಪಕ್ಷಗಳು ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಲೇ ಬಂದಿವೆ. ಇಂತಹ ಸಂದರ್ಭದಲ್ಲಿ ಮೋದಿ ಸರ್ಕಾರ ಈ ರೀತಿಯ ನಿರ್ಧಾರ ಕೈಗೊಂಡಿರುವುದು ಸಂತಸದ ಸಂಗತಿ. 

ಇದನ್ನು ಓದಿ: ಹವಾಮಾನ ಮುನ್ಸೂಚನೆ: ಈ ರಾಜ್ಯಗಳ ಕದತಟ್ಟಲಿದೆ ಮಾನ್ಸೂನ್‌ ಮಾರುತ!

ಈ ಹಿಂದೆ ಏಪ್ರಿಲ್‌ನಲ್ಲಿ, ಪ್ರಧಾನಿ ಮೋದಿ ಅವರು ಉನ್ನತ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ, ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಆದ್ಯತೆ ನೀಡುವಂತೆ ಸೂಚಿಸಿದ್ದರು. ಇದರಿಂದಾಗಿ ಈಗ ಅವಕಾಶಗಳು ಸೃಷ್ಟಿಯಾಗುತ್ತಿವೆ. ಫೆಬ್ರವರಿಯಲ್ಲಿ ರಾಜ್ಯಸಭೆಯಲ್ಲಿ ಮಂಡಿಸಿದ ಸರ್ಕಾರಿ ಅಂಕಿಅಂಶಗಳ ಪ್ರಕಾರ, ಮಾರ್ಚ್ 1, 2020 ರವರೆಗೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 87 ಲಕ್ಷ ಹುದ್ದೆಗಳು ಖಾಲಿ ಇವೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

Trending News