ವಾರಣಾಸಿ: ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ವಾರಣಾಸಿಯಲ್ಲಿ ಉಕ್ರೇನ್‌ನಿಂದ ಭಾರತಕ್ಕೆ ಹಿಂದಿರುಗಿದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ವಾರಣಾಸಿ (ಉತ್ತರ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ವಾರಣಾಸಿಯಲ್ಲಿ ಉಕ್ರೇನ್‌ನಿಂದ ಭಾರತಕ್ಕೆ ಹಿಂದಿರುಗಿದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಇದನ್ನೂ ಓದಿ: Russia-Ukraine Crisis: ಮೋದಿ ಸರ್ಕಾರದ ವಿದೇಶಾಂಗ ನೀತಿಗೆ Shashi Tharoor ಫಿದಾ, ಹೇಳಿದ್ದೇನು ಗೊತ್ತಾ?
ಈ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಅವರೊಂದಿಗೆ ಹಂಚಿಕೊಂಡರು. ವಾರಣಾಸಿ (Varanasi) ಸೇರಿದಂತೆ ಉತ್ತರ ಪ್ರದೇಶದ ಇತರ ಭಾಗದ ವಿದ್ಯಾರ್ಥಿಗಳು ಸಂವಾದದಲ್ಲಿ ಭಾಗಿಯಾಗಿದ್ದರು.
ಒಟ್ಟು 17,000 ಭಾರತೀಯ ಪ್ರಜೆಗಳು ಉಕ್ರೇನ್ (Ukraine) ತೊರೆದಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವ ಉಳಿದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ಆಪರೇಷನ್ ಗಂಗಾ ಅಡಿಯಲ್ಲಿ ವಿಮಾನಗಳನ್ನು ಹೆಚ್ಚಿಸಲಾಗಿದೆ.
ಸ್ಥಳಾಂತರಿಸುವ ಪ್ರಯತ್ನಗಳನ್ನು ಮತ್ತಷ್ಟು ಉತ್ತೇಜಿಸುವ ಹಿನ್ನೆಲೆ ಸರ್ಕಾರವು 'ಆಪರೇಷನ್ ಗಂಗಾ' (Operation Ganga) ಅಡಿಯಲ್ಲಿ 80 ವಿಮಾನಗಳನ್ನು ನಿಯೋಜಿಸಿದೆ.
ಯಾವುದೇ ಅಡೆತಡೆಗಳಿಲ್ಲದೆ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಲು ಸರ್ಕಾರವು ಎರಡು ಡಜನ್‌ಗಿಂತಲೂ ಹೆಚ್ಚು ಸಚಿವರನ್ನು ನಿಯೋಜಿಸಿದೆ ಎಂದು ಮೂಲಗಳು ಗುರುವಾರ ಎಎನ್‌ಐಗೆ ತಿಳಿಸಿವೆ.
ಇದನ್ನೂ ಓದಿ: 7th Pay Commission : ಕೇಂದ್ರ ನೌಕರರಿಗೆ ಸಿಗಲಿದೆ ₹4500 ಲಾಭ! ಹಾಗಿದ್ರೆ, ಆದಷ್ಟು ಬೇಗ ಈ ಕೆಲಸ ಮಾಡಿ
ಮಾರ್ಚ್ 10 ರ ವೇಳೆಗೆ, ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಒಟ್ಟು 80 ವಿಮಾನಗಳನ್ನು ನಿಯೋಜಿಸಲಾಗುವುದು ಎಂದರು. ಈ ವಿಮಾನಗಳು ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಇಂಡಿಗೋ, ಸ್ಪೈಸ್ ಜೆಟ್, ವಿಸ್ತಾರಾ, ಗೋ ಏರ್ ಮತ್ತು ವಾಯುಪಡೆಯ ವಿಮಾನಗಳಿಗೆ ಸೇರಿವೆ. ಕಳೆದ ಕೆಲವು ದಿನಗಳಿಂದ ಪ್ರಧಾನಿಯವರು (Prime Minister) ಈ ವಿಷಯದ ಕುರಿತು ಮಹತ್ವದ ಸಭೆಗಳನ್ನು ನಡೆಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.