PM Modi Japan Visit: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಜಪಾನ್ ಪ್ರವಾಸಕ್ಕೆ ತೆರಳಿದ್ದಾರೆ. ನಾಳೆ ಅಂದರೆ ಸೆಪ್ಟೆಂಬರ್ 27 ರಂದು ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಟೋಕಿಯೊಗೆ ತೆರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಪ್ರಧಾನಿ ಭೇಟಿಯ ಕುರಿತು ಮಾಹಿತಿಯನ್ನು ನೀಡಿದ್ದಾರೆ.
Delhi | Prime Minister Narendra Modi leaves for Tokyo, Japan where he will attend the State funeral of former Japan PM Shinzo Abe, tomorrow pic.twitter.com/59CU69YA4Y
— ANI (@ANI) September 26, 2022
ಮಾಜಿ ಪ್ರಧಾನಿ ಅಬೆ ಅವರ ಗೌರವಾರ್ಥ ಭಾರತವು 9 ಜುಲೈ 2022 ರಂದು ರಾಷ್ಟ್ರೀಯ ಶೋಕಾಚರಣೆಯ ದಿನವನ್ನು ಘೋಷಿಸಿದೆ ಎಂದು ಅವರು ಹೇಳಿದ್ದಾರೆ. ಈ ಭೇಟಿಯು ಅವರ ಸ್ಮರಣೆಯನ್ನು ಗೌರವಿಸುವ ಒಂದು ಅವಕಾಶವಾಗಿದೆ. ಜಪಾನ್ ಪ್ರವಾಸಕ್ಕೆ ತೆರಳುವ ಮುನ್ನ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, "ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನಾನು ಇಂದು ರಾತ್ರಿ ಟೋಕಿಯೊಗೆ ಹೋಗುತ್ತಿದ್ದೇನೆ" ಎಂದ ಅವರು, ಅಬೆ ಅವರನ್ನು ಆತ್ಮೀಯ ಸ್ನೇಹಿತ ಮತ್ತು ಭಾರತ-ಜಪಾನ್ ಸ್ನೇಹ ಎಂದು ಕರೆದಿದ್ದಾರೆ. ಎಲ್ಲಾ ಭಾರತೀಯರ ಪರವಾಗಿ ಸಂತಾಪ ಸೂಚಿಸಲು ಜಪಾನ್ ಪ್ರಧಾನಿ ಕಿಶಿದಾ ಮತ್ತು ಶ್ರೀಮತಿ ಅಬೆ ಅವರನ್ನು ಭೇಟಿ ಮಾಡುವುದಾಗಿ ಪ್ರಧಾನಿ ಹೇಳಿದ್ದಾರೆ.
ಜಪಾನ್ ಪ್ರಧಾನಿ ಜೊತೆ ದ್ವಿಪಕ್ಷೀಯ ಸಭೆ ನಡೆಸಲಿರುವ ಪ್ರಧಾನಿ ಮೋದಿ
ಅಬೆ ಅವರ ದೃಷ್ಟಿಕೋನಕ್ಕೆ ಅನುಗುಣವಾಗಿ ಭಾರತ-ಜಪಾನ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಪ್ರಧಾನಿ ಹೇಳಿದ್ದಾರೆ. ಇದಕ್ಕೂ ಮುನ್ನ ಸುದ್ದಿಗಾರರಿಗೆ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ, ಪ್ರಧಾನಿ ಮೋದಿ ಅವರು ತಮ್ಮ ಜಪಾನ್ ಸಹವರ್ತಿ ಫುಮಿಯೊ ಕಿಶಿಡಾ ಅವರೊಂದಿಗೆ ಸಭೆ ಮತ್ತು ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
ಶಿಂಜೋ ಅಬೆಯನ್ನು ಗುಂಡಿಕ್ಕಿ ಹತ್ಯೆಗೈಯಲಾಗಿತ್ತು
ಜಪಾನ್‌ನಗಾಗಿ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನಿ ಶಿಂಜೋ ಅಬೆ ಅವರನ್ನು ಜುಲೈ 8 ರಂದು ದೇಶದ ಪಶ್ಚಿಮ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ವೇಳೆ ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆಗೈದಿದ್ದಾನೆ ಎಂಬುದು ಇಲ್ಲಿ ಉಲ್ಲೇಖನೀಯ. ಈ ವರ್ಷದ ಮಾರ್ಚ್‌ನಲ್ಲಿ ಜಪಾನ್ ಪ್ರಧಾನಿ ಕಿಶಿದಾ ಭಾರತಕ್ಕೆ ಭೇಟಿ ನೀಡಿದ್ದರು ಮತ್ತು ಕ್ವಾಡ್ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮೇ ತಿಂಗಳಲ್ಲಿ ಜಪಾನ್ ಗೆ ಭೇಟಿ ನೀಡಿದ್ದರು ಎಂದು ಕ್ವಾತ್ರಾ ಮಾಹಿತಿ ನೀಡಿದ್ದಾರೆ. ಈ ವರ್ಷ ಭಾರತ-ಜಪಾನ್ ರಾಜತಾಂತ್ರಿಕ ಸಂಬಂಧಗಳ 70 ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ ಮತ್ತು ಉಭಯ ನಾಯಕರು ತಮ್ಮ ವಿಶೇಷ ಕಾರ್ಯತಂತ್ರದ ಬಾಂಧವ್ಯವನ್ನು ಇನ್ನಷ್ಟು ಗಾಢಗೊಳಿಸಲು ಮಾತುಕತೆ ನಡೆಸಲು ಅವಕಾಶವನ್ನು ಪಡೆಯಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಭಾರತ ಮತ್ತು ಜಪಾನ್ ನಡುವಿನ ಸಂಬಂಧಗಳು ಬಲಗೊಳ್ಳುತ್ತಿವೆ ಹಾಗೂ ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಹವಾಮಾನ ಬದಲಾವಣೆ, ಇಂಧನ, ಮೂಲಸೌಕರ್ಯ, ಕೈಗಾರಿಕಾ ಅಭಿವೃದ್ಧಿ, ಮಾನವ ಸಂಪನ್ಮೂಲ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವೆ ನಿಕಟ ಸಹಕಾರವಿದೆ ಎಂದು ವಿದೇಶಾಂಗ ಕಾರ್ಯದರ್ಶಿಗಳು ಹೇಳಿದ್ದಾರೆ. ಈ ಭೇಟಿಯ ವೇಳೆ ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ನಡುವೆ ಸಂಕ್ಷಿಪ್ತ ದ್ವಿಪಕ್ಷೀಯ ಸಭೆ ನಡೆಯಲಿದೆ, ಇದರಲ್ಲಿ ಎರಡೂ ಕಡೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ-BJP ಯಲ್ಲಿ ಹೊಸ ಅಧ್ಯಕ್ಷರಿಗಾಗಿ ಚುನಾವಣೆ ಇಲ್ಲ, ಜೆ.ಪಿ ನಡ್ದಾ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಕೆ!
100 ದೇಶಗಳ ಪ್ರತಿನಿಧಿಗಳು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ
ಜಪಾನಿನ ಮಾಜಿ ಪ್ರಧಾನಿ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು 20 ಸರ್ಕಾರದ ಮುಖ್ಯಸ್ಥರು ಸೇರಿದಂತೆ ಒಟ್ಟು 100 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕ್ವಾತ್ರಾ ಹೇಳಿದ್ದಾರೆ. ಬುಲೆಟ್ ರೈಲು ಯೋಜನೆ ಕುರಿತು ಪ್ರಧಾನಿ ಮೋದಿ ಮತ್ತು ಕಿಶಿದಾ ಮಾತುಕತೆ ನಡೆಸುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಕ್ವಾತ್ರಾ, ಈ ಸಭೆಯಲ್ಲಿ ಉಭಯ ದೇಶಗಳು ದ್ವಿಪಕ್ಷೀಯ ಬಾಂಧವ್ಯವನ್ನು ಚರ್ಚಿಸಿ ಪರಿಶೀಲಿಸುತ್ತಿವೆ ಮತ್ತು ಅವುಗಳ ಪ್ರಗತಿಯನ್ನು ಒಂದೇ ವಿಷಯಕ್ಕೆ ಸಂಕುಚಿತಗೊಳಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.