ಬಾಂಗ್ಲಾ ಪ್ರಧಾನಿ ಭೇಟಿ ಮಾಡಿದ ಪಿಎಂ ಮೋದಿ: ಉಭಯ ದೇಶಗಳ ನಡುವೆ ಹಲವು ಒಪ್ಪಂದಕ್ಕೆ ಸಹಿ

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜಂಟಿ ಹೇಳಿಕೆ ನೀಡಿದ್ದಾರೆ. ಇಂದು ಬಾಂಗ್ಲಾದೇಶ ಭಾರತದ ಅತಿದೊಡ್ಡ ಅಭಿವೃದ್ಧಿ ಪಾಲುದಾರ. ಜನರಿಂದ ಜನರ ಸಹಕಾರ ನಿರಂತರವಾಗಿ ಸುಧಾರಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

Written by - Bhavishya Shetty | Last Updated : Sep 6, 2022, 03:04 PM IST
    • ಪ್ರಧಾನಿ ನರೇಂದ್ರ ಮೋದಿ - ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮಾತುಕತೆ
    • ಭಾರತ ಮತ್ತು ಬಾಂಗ್ಲಾದೇಶದ ನಡುವೆ ಮಹತ್ವದ ಒಪ್ಪಂದಗಳಿಗೆ ಸಹಿ
    • ಶೇಖ್ ಹಸೀನಾ ಅವರು ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ
ಬಾಂಗ್ಲಾ ಪ್ರಧಾನಿ ಭೇಟಿ ಮಾಡಿದ ಪಿಎಂ ಮೋದಿ: ಉಭಯ ದೇಶಗಳ ನಡುವೆ ಹಲವು ಒಪ್ಪಂದಕ್ಕೆ ಸಹಿ  title=
Narendra Modi

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಎರಡೂ ದೇಶಗಳು ಐಟಿ, ಬಾಹ್ಯಾಕಾಶ ಮತ್ತು ಪರಮಾಣು ಶಕ್ತಿಯಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ನಿರ್ಧರಿಸಿದವು. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ.

ಇದನ್ನೂ ಓದಿ: ರಾಜ್‌ಪಥ್ ಮತ್ತು ಸೆಂಟ್ರಲ್ ವಿಸ್ಟಾಗೆ ಮರು ನಾಮಕರಣ

”ಬಾಂಗ್ಲಾದೇಶ ಭಾರತದ ಅತಿದೊಡ್ಡ ಅಭಿವೃದ್ಧಿ ಪಾಲುದಾರ”

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜಂಟಿ ಹೇಳಿಕೆ ನೀಡಿದ್ದಾರೆ. ಇಂದು ಬಾಂಗ್ಲಾದೇಶ ಭಾರತದ ಅತಿದೊಡ್ಡ ಅಭಿವೃದ್ಧಿ ಪಾಲುದಾರ. ಜನರಿಂದ ಜನರ ಸಹಕಾರ ನಿರಂತರವಾಗಿ ಸುಧಾರಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

“ಬಾಹ್ಯಾಕಾಶ ಮತ್ತು ಪರಮಾಣು ಕ್ಷೇತ್ರಗಳ ಮೇಲಿನ ಒಪ್ಪಂದಗಳು”

ಪ್ರಧಾನಿ ನರೇಂದ್ರ ಮೋದಿ ಅವರು, 'ಐಟಿ, ಬಾಹ್ಯಾಕಾಶ ಮತ್ತು ಪರಮಾಣು ಶಕ್ತಿಯಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ನಾವು ನಿರ್ಧರಿಸಿದ್ದೇವೆ' ಎಂದು ಹೇಳಿದರು. ಕಳೆದ ವರ್ಷ ನಾವು ಬಾಂಗ್ಲಾದೇಶದ ಸ್ವಾತಂತ್ರ್ಯದ 50 ನೇ ವಾರ್ಷಿಕೋತ್ಸವ, ನಮ್ಮ ರಾಜತಾಂತ್ರಿಕ ಸಂಬಂಧಗಳ ಸುವರ್ಣ ಮಹೋತ್ಸವ, ಶೇಖ್ ಮುಜಿಬುರ್ ರೆಹಮಾನ್ ಅವರ ಜನ್ಮ ಶತಮಾನೋತ್ಸವವನ್ನು ಒಟ್ಟಿಗೆ ಆಚರಿಸಿದ್ದೇವೆ. ಮುಂದಿನ 25 ವರ್ಷಗಳಲ್ಲಿ  ಭಾರತ-ಬಾಂಗ್ಲಾದೇಶ ಸ್ನೇಹವು ಹೊಸ ಎತ್ತರವನ್ನು ಮುಟ್ಟುತ್ತದೆ ಎಂದು ನನಗೆ ಖಾತ್ರಿಯಿದೆ ಎಂದರು

ಕುಶಿಯಾರಾ ನದಿಯಿಂದ ನೀರು ಹಂಚಿಕೆ ಕುರಿತು ಮಹತ್ವದ ಒಪ್ಪಂದಕ್ಕೆ ಇಂದು ಸಹಿ ಹಾಕಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಇದು ಭಾರತದ ದಕ್ಷಿಣ ಅಸ್ಸಾಂ ಮತ್ತು ಬಾಂಗ್ಲಾದೇಶದ ಸಿಲ್ಹೆಟ್ ಪ್ರದೇಶಕ್ಕೆ ಪ್ರಯೋಜನವನ್ನು ನೀಡುತ್ತದೆ. ಭಾರತ-ಬಾಂಗ್ಲಾದೇಶ ಗಡಿಯ ಮೂಲಕ ಹಾದುಹೋಗುವ ಇಂತಹ 54 ನದಿಗಳಿವೆ ಮತ್ತು ಶತಮಾನಗಳಿಂದ ಎರಡೂ ದೇಶಗಳ ಜನರ ಜೀವನೋಪಾಯಕ್ಕೆ ಸಂಬಂಧಿಸಿವೆ. ಈ ನದಿಗಳು ಜನಪದ ಕಥೆಗಳು, ಜಾನಪದ ಹಾಡುಗಳು, ನಮ್ಮ ಗಡಿ ಹಂಚಿಕೆಯ ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾಗಿವೆ. 

ಇದನ್ನೂ ಓದಿ: Viral Video : ಟೀಚರ್ಸ್ ಡೇಯಂದು ಮಕ್ಕಳ ಕೆಲಸದಿಂದ ನೆತ್ತಿಗೇರಿದ ಶಿಕ್ಷಕನ ಕೋಪ, ವಿದ್ಯಾರ್ಥಿಗೆ ಹಿಗ್ಗಾ ಮುಗ್ಗ ಥಳಿತ

ಭಾರತಕ್ಕೆ ಧನ್ಯವಾದಗಳು: ಶೇಖ್ ಹಸೀನಾ

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು, 'ಭಾರತವು ಸ್ವಾವಲಂಬಿ ಭಾರತಕ್ಕಾಗಿ ಮಾಡಿದ ನಿರ್ಣಯಗಳನ್ನು ಸಾಧಿಸುವತ್ತ ಸಾಗುತ್ತಿರುವಾಗ ಮುಂದಿನ 25 ವರ್ಷಗಳ ಕಾಲ ನಿಮಗೆ ಅಮೃತ ಕಾಲದ ಶುಭಾಶಯಗಳನ್ನು ಕೋರುತ್ತೇನೆ. ನಾನು ಸುಮಾರು 3 ವರ್ಷಗಳ ನಂತರ ಭಾರತಕ್ಕೆ ಬರುತ್ತಿದ್ದೇನೆ. ಭಾರತಕ್ಕೆ ಧನ್ಯವಾದ ಮತ್ತು ನಮ್ಮ ನಡುವೆ ಸಕಾರಾತ್ಮಕ ಪ್ರಸ್ತಾಪವನ್ನು ಎದುರು ನೋಡುತ್ತಿದ್ದೇನೆ” ಎಂದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News